ಬೆಂಗಳೂರು.ಸೆಪ್ಟೆಂಬರ್.13 ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ನೆ.ಲ. ನರೇಂದ್ರ ಬಾಬು ಅವರು ಬಿಜೆಪಿಗೆ ವಿದಾಯ ಹೇಳಿ, ಮತ್ತೆ ತಮ್ಮ ಮಾತೃಪಕ್ಷ ಕಾಂಗ್ರೆಸ್‌ಗೆ ಅಧಿಕೃತವಾಗಿ ಮರಳಿದ್ದಾರೆ.
ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಪಕ್ಷದ ಧ್ವಜ ಸ್ವೀಕರಿಸುವ ಮೂಲಕ ಅವರು ಕಾಂಗ್ರೆಸ್‌ಗೆ ಮರುಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, “ಕಾಂಗ್ರೆಸ್ ಪಕ್ಷದ ತತ್ವ-ಸಿದ್ಧಾಂತಗಳನ್ನು ಒಪ್ಪಿ ಮಾಜಿ ಶಾಸಕ ನೆ.ಲ. ನರೇಂದ್ರ ಬಾಬು ಅವರು ಮರಳಿ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಸಂತಸದ ವಿಷಯ. ಸಾಮಾಜಿಕ ನ್ಯಾಯ, ಜಾತ್ಯತೀತತೆ ಹಾಗೂ ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ನಮ್ಮ ಸಿದ್ಧಾಂತವನ್ನು ನಂಬಿ ಬಂದಿರುವ ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಸ್ವಾಗತಿಸುತ್ತೇನೆ. ಅವರ ಅಪಾರ ರಾಜಕೀಯ ಅನುಭವ ಮತ್ತು ಜನಪರ ಕಾಳಜಿ ಪಕ್ಷದ ಸಂಘಟನೆಗೆ ಮತ್ತಷ್ಟು ಬಲ ತುಂಬಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಸಚಿವರಾದ ರಾಮಲಿಂಗಾರೆಡ್ಡಿ, ಮಾಜಿ ಸಚಿವರಾದ ಶ್ರೀಮತಿ ರಾಣಿ ಸತೀಶ್, ಹೆಚ್.ಎಂ. ರೇವಣ್ಣ ಸೇರಿದಂತೆ ಹಲವು ಹಿರಿಯ ನಾಯಕರು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿ ಮಾಜಿ ಶಾಸಕರಾದ ನೆ.ಲ. ನರೇಂದ್ರ ಬಾಬು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಸಂತಸದ ಸಂಗತಿ.
ಸಾಮಾಜಿಕ ನ್ಯಾಯ, ಜಾತ್ಯತೀತತೆ ಹಾಗೂ ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಪಕ್ಷಕ್ಕೆ ಆಗಮಿಸಿರುವ ಅವರನ್ನು ಆತ್ಮೀಯವಾಗಿ ಸ್ವಾಗತಿಸುತ್ತೇನೆ.… pic.twitter.com/IPrVHvrd81
— Hariprasad.B.K. (@HariprasadBK2) September 13, 2026












