Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

Facebook
Twitter
Telegram
WhatsApp

 

ಚಿತ್ರದುರ್ಗ, (ಮಾರ್ಚ್.04) : ಚಿತ್ರದುರ್ಗ ತೋಟಗಾರಿಕೆ ಇಲಾಖೆಯ ಅಧೀನದ ಐಯ್ಯನಹಳ್ಳಿ ಗ್ರಾಮದಲ್ಲಿನ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿ ಅರ್ಜಿಗಳನ್ನು ತೋಟಗಾರಿಕೆ ಉಪನಿರ್ದೇಶಕರು, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಕಚೇರಿಯಲ್ಲಿ ಅಥವಾ ಇಲಾಖೆಯ ವೆಬ್‍ಸೈಟ್ https://horticulturedir.karnataka.gov.inನಲ್ಲಿ ಮಾ.15 ರಿಂದ ಏಪ್ರಿಲ್ 14 ರವರೆಗೆ ಕಚೇರಿ ವೇಳೆಯಲ್ಲಿ ಪಡೆಯಬಹುದಾಗಿದೆ.

ಹಿರೇಗುಂಟನೂರು ಹೋಬಳಿ ವ್ಯಾಪ್ತಿಯ ಐಯ್ಯನಹಳ್ಳಿ ಗ್ರಾಮದಲ್ಲಿ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 2022-23ನೇ ಸಾಲಿನಲ್ಲಿ 2022ರ ಮೇ 02 ರಿಂದ 2023ರ ಫೆ.28 ರವರೆಗಿನ ಅವಧಿಯ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಯ್ಕೆಯಾದ ಶಿಬಿರಾರ್ಥಿಗಳಿಗೆ ಜಿಲ್ಲೆಯ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ವಸತಿ ಸಹಿತ ತರಬೇತಿ ನೀಡಲಾಗುವುದು. ತರಬೇತಿಗೆ ಸೇರುವ ಪ್ರತಿ  ಅಭ್ಯರ್ಥಿಯು ವಸತಿ ಗೃಹದಲ್ಲಿ ತಂಗುವುದು ಕಡ್ಡಾಯವಾಗಿರುತ್ತದೆ. ತರಬೇತಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ.1250/-ಮಾಸಿಕ ಶಿಷ್ಯವೇತನ ನೀಡಲಾಗುವುದು.

ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಉಚಿತವಾಗಿ ಎಲ್ಲಾ ತರಹದ ಅವಕಾಶಗಳನ್ನು ಕಲ್ಪಿಸಲಾಗುವುದು, ಆದರೆ ವಸತಿ ನಿಲಯದಲ್ಲಿ ವಾಸ್ತವ್ಯದ ವ್ಯವಸ್ಥೆ ಕಡ್ಡಾಯವಾಗಿರುವುದಿಲ್ಲ ಜೊತೆಗೆ ಶಿಷ್ಯವೇತನಕ್ಕೆ ಅವಕಾಶವಿರುವುದಿಲ್ಲ.

ತರಬೇತಿಗೆ ಒಟ್ಟು 15 ಅಭ್ಯರ್ಥಿಗಳಿಗೆ ಅವಕಾಶವಿದ್ದು, ಅದರಲ್ಲಿ 4 ಮಹಿಳೆಯರು, 11 ಪುರುಷರು, ಪರಿಶಿಷ್ಟ ಜಾತಿ 02, ಪರಿಶಿಷ್ಟ ಪಂಗಡಕ್ಕೆ 1 ಮೀಸಲಾತಿ ಇದೆ.

ಅಭ್ಯರ್ಥಿಗಳನ್ನು ಸರ್ಕಾರದ ಮೀಸಲಾತಿ ನಿಯಮಾನುಸಾರ ಆಯ್ಕೆ ಮಾಡಲಾಗುತ್ತಿದ್ದು, ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ. ಉತ್ತೀರ್ಣವಾಗಿರಬೇಕು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 18 ವರ್ಷ ದಿಂದ 33 ವರ್ಷ, ಮಾಜಿ ಸೈನಿಕರಿಗೆ 33 ವರ್ಷ ದಿಂದ 65 ವರ್ಷ ವಯಸ್ಸಿನವರಾಗಿರಬೇಕು, ತರಬೇತಿ ಪಡೆಯುವ ಅಭ್ಯರ್ಥಿಯ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಜಮೀನನ್ನು ಸಾಗುವಳಿ ಮಾಡುತ್ತಿರಬೇಕು, ಈ ಬಗ್ಗೆ ಪಹಣಿಯನ್ನು ನೀಡುವುದು ಕಡ್ಡಾಯವಾಗಿರುತ್ತದೆ. ಮಾಜಿ ಸೈನಿಕರ ಮಕ್ಕಳು ತರಬೇತಿ ಪಡೆಯಲು ಡಿಸ್‍ಜಾರ್ಜ್ ಬುಕ್, ಪರ್ಸನಲ್ ಪೆನ್ಶೆನ್ ಆರ್ಡರ್ ಕಾಪಿ, ಎಕ್ಸ್ ಸರ್ವಿಸ್ ಮ್ಯಾನ್ ಐಡಿ ಕಾರ್ಡ್ ಕಾಪಿ, ಇತ್ಯಾದಿಗಳನ್ನ ಸಲ್ಲಿಸಬೇಕು.
ಸಾಮಾನ್ಯ ಅಭ್ಯರ್ಥಿಗಳು ಅರ್ಜಿ ಶುಲ್ಕ ರೂ.30, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಮಾಜಿ ಸೈನಿಕ ಅಭ್ಯರ್ಥಿಗಳು ಅರ್ಜಿ ಶುಲ್ಕ  ರೂ.15ಮೌಲ್ಯದ ಇಂಡಿಯನ್ ಪೋಸ್ಟಲ್ ಆರ್ಡರ್ ಅಥವಾ ಡಿಮ್ಯಾಂಡ್ ಡ್ರಾಫ್ಟ್ (ಆಆ) ಮೂಲಕ ಡೆಪ್ಯುಟಿ ಡೈರೆಕ್ಟರ್ ಆಫ್ ಹಾರ್ಟಿಕಲ್ಚರ್‍ವ (ZP) ಚಿತ್ರದುರ್ಗ ಅವರ ಹೆಸರಿನಲ್ಲಿ ಪಡೆದು ಏಪ್ರಿಲ್ 16ರ ಸಂಜೆ 5ಗಂಟೆಯೊಳಗೆ  ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಚಿತ್ರದುರ್ಗ ಅವರ ಕಚೇರಿ ಅಥವಾ ಸಹಾಯಕ ತೋಟಗಾರಿಕೆ ನಿರ್ದೇಶಕರು ತೋಟಗಾರಿಕೆ ತರಬೇತಿ ಕೇಂದ್ರ ಮತ್ತು ಕ್ಷೇತ್ರ, ಐಯ್ಯನಹಳ್ಳಿ ಚಿತ್ರದುರ್ಗ ಅವರ ಕಚೇರಿ ದೂರವಾಣಿ ಸಂಖ್ಯೆ 9880618700, 9980991048 ಅನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಲ್ಲರ ಹೃದಯದಲ್ಲಿ ಜಗಜ್ಯೋತಿ ಬಸವೇಶ್ವರ ಅನಾವರಣವಾಗಲಿ : ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಭಿಮತ

Let Jagajyoti Basaveshwara be unveiled in everyone’s heart: ADC BT Kumaraswamy ಚಿತ್ರದುರ್ಗ‌.  ಮೇ.10:   ಸರ್ಕಾರದ ಆದೇಶದಂತೆ ಎಲ್ಲಾ ಕಚೇರಿಗಳಲ್ಲಿ ಬಸವೇಶ್ವರ ಭಾವಚಿತ್ರವನ್ನು ಅನಾವರಣಗೊಳಿಸಲಾಗಿದೆ. ನಿಜವಾಗಿಯೂ ನಮ್ಮೆಲ್ಲರ ಹೃದಯದಲ್ಲಿ ಜಗಜ್ಯೋತಿ ಬಸವೇಶ್ವರರು

T20 ವಿಶ್ವಕಪ್ ಗೂ ಮುನ್ನವೇ ಕೋಚ್ ರಾಹುಲ್ ದ್ರಾವಿಡ್ ಅವಧಿ ಮುಕ್ತಾಯ.. ಮುಂದೇನು ಕಥೆ..?

ಸದ್ಯಕ್ಕೆ ಐಪಿಎಲ್ ನಡೆಯುತ್ತಿದೆ. ಈ ಐಪಿಎಲ್ ಪಂದ್ಯಗಳು ಮುಗಿಯುತ್ತಿದ್ದಂತೆ ಟಿ20 ವಿಶ್ವಕಪ್ ಆರಂಭವಾಗಲಿದೆ‌. ಜೂನ್ 2ರಿಂದ ವಿಶ್ವಕಪ್ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನವೇ ಟೀಂ ಇಂಡಿಯಾಕ್ಕೆ ಆಘಾತಕಾರಿ ಸುದ್ದಿಯೊಂದು ಸಿಕ್ಕಿದೆ. ಬಿಸಿಸಿಐ ನಿಂದ ಕೋಚ್

SSLC ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿ : ಎಂಗೇಜ್ಮೆಂಟ್ ಮಾಡಿಕೊಳ್ಳಲು ಬಂದವನಿಂದ ಬರ್ಬರ ಹತ್ಯೆ..!

ಕೊಡಗು: ಎಸ್ಎಸ್ಎಲ್ಸಿ ಫಲಿತಾಂಶ ನಿನ್ನೆಯಷ್ಟೆ ಪ್ರಕಟಗೊಂಡಿದೆ. ಎಸ್ಎಸ್ಎಲ್ಸಿ ಪರೀಕ್ಷೆ ವಿದ್ಯಾರ್ಥಿಗಳ ಭವಿಷ್ಯದ ಬುನಾದಿ. ಮುಂದಿನ ಉಜ್ವಲ ಭವಿಷ್ಯ ಇಲ್ಲಿಂದ ಶುರು. ಇಂಥ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು, ಮುಂದಿನ ಓದಿನ ಬಗ್ಗೆ ಆ ವಿದ್ಯಾರ್ಥಿನಿ

error: Content is protected !!