Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಜವಾಹರ್ ಬಾಲ್ ಮಂಚ್‍ನ ಜಿಲ್ಲಾಧ್ಯಕ್ಷರಾಗಿ ಜಿ.ದಾದಾಪೀರ್ ನೇಮಕ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

 

ಸುದ್ದಿಒನ್, ಚಿತ್ರದುರ್ಗ ಸೆ. 13 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಜವಾಹರ್ ಬಾಲ್ ಮಂಚ್‍ನ ಜಿಲ್ಲಾಧ್ಯಕ್ಷರಾಗಿ ಜಿ.ದಾದಾಪೀರ್ ರವರನ್ನು ಜವಾಹರ ಬಾಲ್ ಮಂಚ್‍ನ ರಾಜ್ಯಧ್ಯಕ್ಷರಾದ ಹೆಚ್.ಜೆ. ಮೈನದ್ದೀನ್ ನೇಮಕ ಮಾಡಿದ್ದು ಅದೇಶ ಪ್ರತಿಯನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾಧ್ಯಕ್ಷರಾದ ಎಂ.ಕೆ.ತಾಜ್‍ಪೀರ್ ವಿತರಣೆ ಮಾಡಿದರು.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜನ ಖರ್ಗೆ, ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ ಸಿಂಗ್ ಸುರ್ಜೆವಾಲ್, ಜವಹರಬಾಲ್‍ಮಂಚ್ ರಾಷ್ಟ್ರೀಯ ಅಧ್ಯಕ್ಷರಾದ ಜೆ.ವಿ. ಹರಿರವರ ಆದೇಶದ ಮೇರೆಗೆ ಚಿತ್ರದುರ್ಗ ಜವಾಹರ್‍ಬಾಲ್‍ಮಂಚ್‍ನ ಜಿಲ್ಲಾಧ್ಯಕ್ಷರಾಗಿ ಜಿ.ದಾದಾಪೀರ್ ರವರನ್ನು ನೇಮಕ ಮಾಡಲಾಗಿದೆ.

ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಜಿಲ್ಲಾಧ್ಯಕ್ಷರಾಗಿ ಜಿ.ದಾದಾಪೀರ್‍ರವರಿಗೆ ನೇಮಕಾತಿ ಪತ್ರ ವಿತರಿಸಿ ಮಾತನಾಡಿದ ಎಂ.ಕೆ.ತಾಜ್‍ಪೀರ್ 140 ವರ್ಷಗಳ ಇತಿಹಾಸವುಳ್ಳ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಹುದ್ದೆ ಪಡೆದುಕೊಂಡರು ಖುಷಿ ಪಡಬೇಕು. ದೇಶದ ಸ್ವಾತಂತ್ರಕ್ಕಾಗಿ ಬ್ರಿಟೀಷರ ವಿರುದ್ದ ಹೋರಾಡಿದ್ದು, ಕಾಂಗ್ರೆಸ್ ಪಕ್ಷ ಅನೇಕ ವರ್ಷಗಳಿಂದಲೂ ಪಕ್ಷಕ್ಕಾಗಿ ಸೇವೆ ಸಲ್ಲಿಸುತ್ತಿರುವುದನ್ನು ಗುರುತಿಸಿ ನೇಮಕ ಮಾಡಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಧುಗೌಡ, ವಾಸಿಂ, ರಹಿಮಾನ್, ಉಮೇಶ್, ಅಬಿದ್ ಉಸೇನ್ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now