ಬೆಂಗಳೂರು : ಗೌರಿ-ಗಣೇಶ ಹಬ್ಬದ ಪ್ರಯುಕ್ತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕನಕಪುರ ವಿಧಾನಸಭಾ ಕ್ಷೇತ್ರ ಹಾಗೂ ಬೆಂಗಳೂರಿನ ಬಸವನಗುಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ, ಸಾರ್ವಜನಿಕರೊಂದಿಗೆ ಹಬ್ಬವನ್ನು ಸಡಗರದಿಂದ ಆಚರಿಸಿದರು.
ಕನಕಪುರ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಮುಖ್ಯಮಂತ್ರಿಗಳು, ಸಾರ್ವಜನಿಕರು ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಗಳ ದರ್ಶನ ಪಡೆದು ವಿಶೇಷ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಜನರನ್ನು ಭೇಟಿ ಮಾಡಿ ಕುಶಲೋಪರಿ ವಿಚಾರಿಸಿದ ಅವರು, ಜನರ ಆತ್ಮೀಯತೆ ಮತ್ತು ಪ್ರೀತಿಗೆ ಸದಾ ಚಿರಋಣಿ ಎಂದು ಭಾವನಾತ್ಮಕವಾಗಿ ನುಡಿದರು.
ಅಗಜಾನನ ಪದ್ಮಾರ್ಕಂ ಗಜಾನನ ಮಹಾರ್ನಿಶಂ
ಅನೇಕದಂತಂ ಭಕ್ತಾನಾಂ ಏಕದಂತಂ ಉಪಾಸ್ಮಹೆಯ್ಇದನ್ನು ಓದಿಯುಪಿಐ ಬಳಕೆದಾರರಿಗೆ ಗುಡ್ ನ್ಯೂಸ್: ₹2,000 ಒಳಗಿನ ವಹಿವಾಟಿನ ಶುಲ್ಕದ ಬಗ್ಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟನೆಕನಕಪುರ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಪ್ರತಿಷ್ಠಾಪಿಸಿದ್ದ ಶ್ರೀ ಗಣೇಶನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ಪ್ರಾರ್ಥಿಸಿದೆ.
ನಾಡಿನ ಜನರ ಬದುಕಿನಲ್ಲಿರುವ ಎಲ್ಲಾ ವಿಘ್ನಗಳನ್ನು ದೂರವಾಗಲಿ, ಪ್ರತಿಯೊಂದು ಕುಟುಂಬಕ್ಕೂ ಸುಖ,… pic.twitter.com/VPQRO3NSLH
— DK Shivakumar (@DKShivakumar) September 14, 2026
ಬಳಿಕ ಬೆಂಗಳೂರಿನ ಐತಿಹಾಸಿಕ ಬಸವನಗುಡಿಯ ಶ್ರೀ ದೊಡ್ಡ ಗಣಪತಿ ದೇವಸ್ಥಾನಕ್ಕೆ ಸಹೋದರ ಡಿ.ಕೆ. ಸುರೇಶ್ ಅವರೊಂದಿಗೆ ತೆರಳಿ, ವಿಘ್ನವಿನಾಶಕನಿಗೆ ವಿಶೇಷ ಪೂಜೆ ಸಲ್ಲಿಸಿದರು.
ನಾಡಿನ ಜನರ ಬದುಕಿನ ಎಲ್ಲಾ ವಿಘ್ನಗಳು ನಿವಾರಣೆಯಾಗಿ, ಪ್ರತಿಯೊಂದು ಕುಟುಂಬದಲ್ಲೂ ಸುಖ, ಶಾಂತಿ, ನೆಮ್ಮದಿ ಹಾಗೂ ಸಮೃದ್ಧಿ ನೆಲೆಸಲಿ ಮತ್ತು ರಾಜ್ಯವು ಸಮೃದ್ಧಿ ಪಥದಲ್ಲಿ ಮುನ್ನಡೆಯಲಿ ಎಂದು ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಶುಭ ಹಾರೈಸಿದರು.













