Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲೆಯಾದ್ಯಂತ ಡಿ.ಜೆ, ಹೈ-ಡೆಸಿಬಲ್ ಧ್ವನಿವರ್ಧಕಗಳ ಬಳಕೆಗೆ ಸಂಪೂರ್ಣ ನಿಷೇಧ: ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಆದೇಶ

---Advertisement---

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 15 : ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಡಿ.ಜೆ. ಸಿಸ್ಟಂ, ಬೇಸ್ ಬೂಸ್ಟರ್ಗಳು ಮತ್ತು ಕರ್ಕಶ ಶಬ್ದ ಹೊರಡಿಸುವ ಧ್ವನಿವರ್ಧಕಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಹಬ್ಬಗಳು ಮೆರವಣಿಗೆಗಳು ಹಾಗೂ ಸಾರ್ವಜನಿಕ ಕಾರ್ಯಕ್ರಮಗಳ ವೇಳೆ ಅತಿಹೆಚ್ಚಿನ ಡೆಸಿಬಲ್ ಡಿ.ಜೆ. ಸಿಸ್ಟಂ / ಅತಿ ಹೆಚ್ಚು ಶಬ್ದ ಹೊರಡಿಸುವ ಉಪಕರಣಗಳ ಬಳಕೆಯಿಂದಾಗಿ ಮೆರವಣಿಗೆಯ ಸಮಯದಲ್ಲಿ ಹೆಚ್ಚಿನ ಜನರು ಸೇರುವುದರಿಂದ, ಸದರಿ ಸಮಯದಲ್ಲಿ ಕಾಲ್ತುಳಿತ / ಅವಘಡಗಳು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುವುದಲ್ಲದೇ, ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಬರುವ ಸಾಧ್ಯತೆಗಳು ಕಂಡು ಬರುವ ಹಿನ್ನಲೆಯಲ್ಲಿ ಮಾನ್ಯ ಜಿಲ್ಲಾಧಿಕಾರಿಗಳು. ಚಿತ್ರದುರ್ಗ ಜಿಲ್ಲೆ ರವರು ಶಬ್ದ ಮಾಲಿನ್ಯ (ನಿಯಂತ್ರಣ ಮತ್ತು ನಿಯಮ) ನಿಯಮಗಳು 2000 ಮತ್ತು ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ (ಬಿ.ಎನ್.ಎಸ್.ಎಸ್) – 2023ರ ಕಲಂ 163 ಹಾಗೂ ಕರ್ನಾಟಕ ಪೊಲೀಸ್ ಅಧಿನಿಯಮ ಕಲಂ 36ರಡಿಯಲ್ಲಿ ಸಾರ್ವಜನಿಕ ಸುವ್ಯವಸ್ಥೆಯ ಹಿತದೃಷ್ಟಿಯಿಂದ ಚಿತ್ರದುರ್ಗ ಜಿಲ್ಲೆ ವ್ಯಾಪ್ತಿಯಲ್ಲಿ ಯಾವುದೇ ಡಿ.ಜೆ. ವ್ಯವಸ್ಥೆಗಳು, ಬೇಸ್ ಬೂಸ್ಟರ್ಗಳು, ಮೊಬೈಲ್ ಡಿ.ಜೆ. ವಾಹನಗಳು ಹಾಗೂ 75 ಡೆಸಿಬಲ್ ಗಿಂತ ಹೆಚ್ಚಿನ ಶಬ್ದ ಹೊರಸೂಸುವ ಸಾಧನಗಳ ಬಳಕೆ ಸಂಪೂರ್ಣವಾಗಿ ನಿಷೇಧಿಸಿರುತ್ತಾರೆ.

ಇದಲ್ಲದೇ ವಸತಿ ಪ್ರದೇಶಗಳು, ಸೈಲೆಂಟ್ ಝನ್ಗಳು (ಆಸ್ಪತ್ರೆ, ಶಾಲೆ, ನ್ಯಾಯಾಲಯ ಹಾಗೂ ಧಾರ್ಮಿಕ ಸ್ಥಳಗಳಿಂದ 100 ಮೀಟರ್ ವ್ಯಾಪ್ತಿಯೊಳಗಿನ ಪ್ರದೇಶಗಳು) ರಸ್ತೆ / ಸಂಚಾರ ದಟ್ಟಣೆ ಇರುವ ಪ್ರದೇಶಗಳು, ಸಮುದಾಯ ಸೂಕ್ಷ್ಮ ಪ್ರದೇಶಗಳು ಹಾಗೂ ಇಡೀ ಜಿಲ್ಲೆಯಾದ್ಯಾಂತ ರಾತ್ರಿ 10.00 ಗಂಟೆಯಿಂದ ಬೆಳಿಗ್ಗೆ 6.00 ಗಂಟೆಯವರೆಗೆ ಡಿ.ಜೆ. ಅಥವಾ ಹೆಚ್ಚಿನ ಶಬ್ದ ಹೊರಸೂಸುವ ಸಾಧನಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಿರುತ್ತಾರೆ.

ಯಾವುದೇ ಸಾರ್ವಜನಿಕ ಕಾರ್ಯಕ್ರಮ, ಮೆರವಣಿಗೆ ಅಥವಾ ಆಚರಣೆಯನ್ನು ಆಯೋಜಿಸುವವರು ಅತೀ ಅವಶ್ಯವಿದ್ದಲ್ಲಿ ಪೂರ್ವ ಲಿಖಿತ ಷರತ್ತುಬದ್ಧ ಕಡಿಮೆ ಶಬ್ದ ಹೊರಸೂಸುವ ವ್ಯವಸ್ಥೆಗಳಿಗೆ ಮಾತ್ರ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದ್ದು, ಶಬ್ದ ನಿಯಮಗಳ ಪಾಲನೆಗೆ ಸಂಬಂಧಿಸಿದಂತೆ ಲಿಖಿತ ಮುಚ್ಚಳಿಕೆ ಪತ್ರ ನೀಡಿ, ಷರತ್ತುಗಳನ್ನು ಮತ್ತು ಆದೇಶವನ್ನು ಉಲ್ಲಂಘನೆ ಮಾಡಿದ್ದಲ್ಲಿ ಆಯೋಜಕರು ವೈಯಕ್ತಿಕವಾಗಿ ಹೊಣೆಗಾರರಾಗಿರುತ್ತಾರೆಂದು ದಿನಾಂಕ:15.09.2026ರಂದು ಆದೇಶ ಹೊರಡಿಸಿರುತ್ತಾರೆ.

ಈ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಾಂತ ಡಿ.ಜೆ. ವ್ಯವಸ್ಥೆಗಳು, ಬೇಸ್ ಬೂಸ್ಟರ್ಗಳು, ಮೊಬೈಲ್ ಡಿ.ಜೆ. ವಾಹನಗಳು ಹಾಗೂ 75 ಡೆಸಿಬಲ್ ಗಿಂತ ಹೆಚ್ಚಿನ ಶಬ್ದ ಹೊರಸೂಸುವ ಸಾಧನಗಳ ಬಳಕೆ ಸಂಪೂರ್ಣವಾಗಿ ನಿಷೇಧಿಸಲು ಕ್ರಮ ಕೈಗೊಂಡಿದ್ದು, ಯಾವುದೇ ಮೆರವಣಿಗೆ / ಸಭೆ / ಸಮಾರಂಭಗಳ ಆಚರಣೆ ಸಮಯದಲ್ಲಿ ಡಿ.ಜೆ. ಬಳಕೆ ಮಾಡಿದ್ದಲ್ಲಿ ಅಲ್ಲದೇ ಚಾಲ್ತಿಯಲ್ಲಿರುವ ಕಾನೂನುಗಳನ್ನು ಉಲ್ಲಂಘನೆ ಮಾಡುವುದು ಕಂಡು ಬಂದಲ್ಲಿ ಸಂಬಂಧಪಟ್ಟ ಸಂಘಟಕರ ವಿರುದ್ಧ ಹಾಗೂ ಡಿ.ಜೆ. ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿ ಡಿ.ಜೆ. ಮತ್ತು ಹೆಚ್ಚಿನ ಶಬ್ದ ಹೊರಸೂಸುವ ಸಾಧನ ಮತ್ತು ಇತರೆ ಉಪಕರಣಗಳನ್ನು ಅಮಾನತ್ತುಪಡಿಸಿಕೊಂಡು ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now