ಚಿತ್ರದುರ್ಗ,(ಮಾ.04) : 2022 – 23ರ ಬಜೆಟ್ ಮಂಡನೆಯಲ್ಲಿ ಜನರಿಗೆ ಸಾಕಷ್ಟು ನಿರೀಕ್ಷೆಗಳಿದ್ದವು. ಸಿಎಂ ಬಸವರಾಜ್ ಬೊಮ್ಮಾಯಿ ಅವರ ಆಡಳಿತಾವಧಿಯಲ್ಲಿ ಚೊಚ್ಚಲ ಬಜೆಟ್ ಮಂಡಿಸಿದ್ದು, ಕೋಟೆ ನಾಡು ಚಿತ್ರದುರ್ಗದ ಜನರಿಗೆ ಒಂದಷ್ಟು ಯೋಜನೆಗಳನ್ನು ಅನೌನ್ಸ್ ಮಾಡಿದ್ದಾರೆ.
ಅದರಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಕೂಡ ಒಂದು. ಈ ಕಾಲೇಜಿನ ಬಗ್ಗೆ ದುರ್ಗದ ಜನರಿಗೆ ಸಾಕಷ್ಟು ನಿರೀಕ್ಷೆಗಳಿದ್ದವು ಅದರಂತೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಇಂದು ಈ ಯೋಜನೆ ಘೋಷಣೆ ಮಾಡಿದ್ದಾರೆ.
ಉಳಿದಂತೆ, ಚಿತ್ರದುರ್ಗ ಶಾಖ ಕಾಲುವೆಯ 60 ಕಿಲೋಮೀಟರ್ ಹೊರಗಿನ ಕಾಮಗಾರಿಯನ್ನು ಪೂರ್ಣಗೊಳಿಸಿ ಹೊಳಲ್ಕೆರೆ ಫೀಡರ್ ಕಾಲುವೆಯಡಿ ಬರುವ 28 ಕೆರೆಗಳನ್ನು ತುಂಬಿಸಲಾಗುವುದು ಎಂದು ಸಿಎಂ ಘೋಷಣೆ ಮಾಡಿದ್ದಾರೆ.
ಕರ್ನಾಟಕ ಹಾಲು ಒಕ್ಕೂಟದ ಸಹಯೋಗದೊಂದಿಗೆ ದಾವಣಗೆರೆ- ಚಿತ್ರದುರ್ಗ ಜಿಲ್ಲೆಯಲ್ಲಿ ಜಿಲ್ಲಾ ಹಾಲು ಒಕ್ಕೂಟಗಳ ರಚಿಸಲು ಉದ್ದೇಶಿಸಿದೆ.
ಜೊತೆಗೆ ಮೊಳಕಾಲ್ಮೂರು ನಲ್ಲಿ ಸೀರೆ ಮೈಕ್ರೋ ಕ್ಲಸ್ಟರ್ ಅನ್ನು ಅಭಿವೃದ್ಧಿಪಡಿಸಲಾಗುವುದು.
ತುಮಕೂರು -ಚಿತ್ರದುರ್ಗ- ದಾವಣಗೆರೆ ಜಿಲ್ಲೆಯ ರೈಲ್ವೆ ಮಾರ್ಗ ಯೋಜನೆಗಳಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ನಿಪ್ಪಾಣಿಯಲ್ಲಿ ಕೊಲ್ಲಾಪುರಿ ಪಾದರಕ್ಷೆಗಳ ಕ್ಲಸ್ಟರ್ ಮತ್ತು ಚಿತ್ರದುರ್ಗದಲ್ಲಿ ಕೇಂದ್ರ ಪಾದರಕ್ಷ ತರಬೇತಿ ಸಂಸ್ಥೆಯ ವಿಸ್ತೀರ್ಣ ಕೇಂದ್ರ ಪ್ರಾರಂಭ ಮಾಡಲು ಯೋಜನೆ ರೂಪಿಸಲಾಗಿದೆ.