Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸೆ.17 ರಿಂದ ವಿ.ವಿ.ಸಾಗರ ಬಲದಂಡೆ ನಾಲೆಗೆ ನೀರು ಬಿಡುಗಡೆ: ಕಾಲುವೆ, ಹಳ್ಳಗಳಿಗೆ ಇಳಿಯದಂತೆ ಮುನ್ನೆಚ್ಚರಿಕೆ

---Advertisement---

ಚಿತ್ರದುರ್ಗ. ಸೆ.16: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಸಾಗರ (ವಿ.ವಿ.ಸಾಗರ) ಜಲಾಶಯದಿಂದ ಬಲದಂಡೆ ನಾಲೆಯ ಮೂಲಕ ಸುವರ್ಣಮುಖಿ ನದಿಯ 4 ಚೆಕ್ ಡ್ಯಾಂಗಳಿಗೆ ಸೆಪ್ಟೆಂಬರ್ 17 ರಿಂದ 0.10 ಟಿ.ಎಂ.ಸಿ ನೀರನ್ನು ಹರಿಸಲಾಗುತ್ತದೆ ಎಂದು ವಿಶ್ವೇಶ್ವರಯ್ಯ ಜಲ ನಿಗಮದ ಅಧೀಕ್ಷಕ ಎಂಜಿನಿಯರ್ ತಿಳಿಸಿದ್ದಾರೆ.

ಕಂದಾಯ ಇಲಾಖೆಯ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಚಿತ್ರದುರ್ಗ ಜಿಲ್ಲಾಧಿಕಾರಿಗಳ ಆದೇಶದಂತೆ, ಕುಂದಲಗುರ ಬಳಿಯ ವಿತರಣಾ ತೊಟ್ಟಿಯಿಂದ ನದಿಗೆ ನೀರನ್ನು ಹರಿಸಲು ಅಗತ್ಯ ಕ್ರಮ ವಹಿಸಲಾಗಿದೆ.

ಸಾರ್ವಜನಿಕ ಸುರಕ್ಷತೆ ಹಾಗೂ ಮುನ್ನೆಚ್ಚರಿಕಾ ಕ್ರಮವಾಗಿ ಕಾಲುವೆ, ಚೆಕ್ ಡ್ಯಾಂ ಹಾಗೂ ಹಳ್ಳದ ಪಾತ್ರಗಳಲ್ಲಿ ಸಾರ್ವಜನಿಕರು ತಿರುಗಾಡುವುದು, ಜನ-ಜಾನುವಾರುಗಳನ್ನು ಇಳಿಸುವುದು, ಈಜಾಡುವುದು ಅಥವಾ ಇನ್ನಿತರ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅಲ್ಲದೆ, ನೀರಾವರಿ ಕಾಲುವೆ ಅಥವಾ ಕಟ್ಟಡಗಳನ್ನು ಹಾನಿಗೊಳಿಸುವುದು ಮತ್ತು ಅನಧಿಕೃತವಾಗಿ ಪಂಪ್‍ಸೆಟ್‍ಗಳನ್ನು ಅಳವಡಿಸಿ ನೀರು ಎತ್ತುವುದು ನೀರಾವರಿ ಕಾಯ್ದೆಯಡಿ ಅಪರಾಧವಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ರೀತಿಯ ಕಠಿಣ ಕ್ರಮ ಜರುಗಿಸಲಾಗುವುದು ಎಂದು ವಿಶ್ವೇಶ್ವರಯ್ಯ ಜಲ ನಿಗಮದ ಅಧೀಕ್ಷಕ ಎಂಜಿನಿಯರ್ ಎಚ್ಚರಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now