Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭೋವಿ ಅಭಿವೃದ್ಧಿ ನಿಗಮ: ಉಚಿತ ಟೈಲರಿಂಗ್ ತರಬೇತಿ ಹಾಗೂ ಯಂತ್ರೋಪಕರಣ ವಿತರಣೆಗೆ ಅರ್ಜಿ ಆಹ್ವಾನ

---Advertisement---

ಚಿತ್ರದುರ್ಗ. ಸೆ.16: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಹಾಗೂ ಜಿಲ್ಲೆಯ ಇತರ 6 ತಾಲೂಕುಗಳಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ ಭೋವಿ ಜನಾಂಗದ ನಿರುದ್ಯೋಗ ಯುವಕ-ಯುವತಿಯರಿಗೆ ಸ್ವಯಂ ಉದ್ಯೋಗಾವಕಾಶ ಹೆಚ್ಚಿಸುವ ಉದ್ದೇಶದಿಂದ ಉಚಿತ ಟೈಲರಿಂಗ್ ತರಬೇತಿ ಹಾಗೂ ಹೊಲಿಗೆ ಯಂತ್ರ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ಹಿರಿಯೂರು ತಾಲೂಕಿನಲ್ಲಿ ನಿಗದಿಪಡಿಸಿದ ಗುರಿಗಿಂತ ಕಡಿಮೆ ಅರ್ಜಿಗಳು ಬಂದಿರುವುದರಿಂದ, ಹಿರಿಯೂರು ಸೇರಿದಂತೆ ಚಿತ್ರದುರ್ಗ ಜಿಲ್ಲೆಯ 6 ತಾಲೂಕುಗಳ ಆಸಕ್ತ ಅರ್ಹ ಅಭ್ಯರ್ಥಿಗಳು ಇದೇ ಸೆಪ್ಟೆಂಬರ್ 15 ರಿಂದ ಸೆಪ್ಟೆಂಬರ್ 20 ರೊಳಗೆ ಅಗತ್ಯ ದಾಖಲೆಗಳೊಂದಿಗೆ ನಿಗಮದ ಚಿತ್ರದುರ್ಗ ಜಿಲ್ಲಾ ಕಚೇರಿಗೆ ನೇರವಾಗಿ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿದಾರರು ಪರಿಶಿಷ್ಟ ಜಾತಿ ಭೋವಿ ಸಮುದಾಯಕ್ಕೆ ಸೇರಿದ 18 ರಿಂದ 45 ವರ್ಷ ವಯೋಮಿತಿಯ ಕರ್ನಾಟಕದ ನಿವಾಸಿಯಾಗಿರಬೇಕು. ಸ್ಥಳೀಯ ನಿವಾಸದ ದಾಖಲೆಯನ್ನು ಲಗತ್ತಿಸುವುದು ಕಡ್ಡಾಯವಾಗಿದೆ. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳು ಪ್ರತಿದಿನ 8 ಗಂಟೆಗಳಂತೆ 75 ದಿನಗಳ ಕಾಲ ಪೂರ್ಣ ತರಬೇತಿಗೆ ಕಡ್ಡಾಯವಾಗಿ ಹಾಜರಾಗಬೇಕಿದ್ದು, ಸಂಸ್ಥೆಯ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ನಿಯಮ ಉಲ್ಲಂಘಿಸಿದರೆ ಅರ್ಹತೆಯನ್ನು ರದ್ದುಗೊಳಿಸಲಾಗುವುದು. ತರಬೇತಿ ಯಶಸ್ವಿಯಾಗಿ ಪೂರ್ಣಗೊಂಡ ನಂತರವಷ್ಟೇ ಉಚಿತ ಹೊಲಿಗೆ ಯಂತ್ರ ಉಪಕರಣಗಳನ್ನು ವಿತರಿಸಲಾಗುತ್ತದೆ.

ಅರ್ಜಿಯೊಂದಿಗೆ ಆಧಾರ್ ಕಾರ್ಡ್ ಪ್ರತಿ, ನಿವಾಸ ಪ್ರಮಾಣಪತ್ರ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಬಿಪಿಎಲ್ ಕಾರ್ಡ್ ಹಾಗೂ ಪಾಸ್‍ಪೋಟ ಸೈಜ್ ಫೋಟೋಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಅಪೂರ್ಣ ಅಥವಾ ತಪ್ಪು ಮಾಹಿತಿಯುಳ್ಳ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಸಂಸ್ಥೆಯು ಯಾವುದೇ ಕಾರಣ ಸೂಚಿಸದೆ ಅರ್ಜಿಯನ್ನು ತಿರಸ್ಕರಿಸುವ ಅಥವಾ ಆಯ್ಕೆ ಮಾಡುವ ಹಕ್ಕು ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, 2ನೇ ಮಹಡಿ, ಪಾಲಾಕ್ಷ ಕಾಂಪೌಂಡ್, ಬಿ.ಡಿ. ಮುಖ್ಯ ರಸ್ತೆ, ಐ.ಸಿ.ಐ.ಸಿ.ಐ. ಬ್ಯಾಂಕ್ ಮುಂಭಾಗ, ಚಿತ್ರದುರ್ಗ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now