ಚಿತ್ರದುರ್ಗ.ಸೆ.17: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಸೆಪ್ಟೆಂಬರ್ 21ರಂದು ನಗರದ ಉದ್ಯೋಗ ವಿನಿಮಯ ಕೇಂದ್ರದ ಕಚೇರಿಯಲ್ಲಿ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ನೇಮಕಾತಿ ಸಂದರ್ಶನ (Walk-in Interview) ಆಯೋಜಿಸಲಾಗಿದೆ.
ಖಾಸಗಿ ರಂಗದ ವಿವಿಧ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿವೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.
ಆಸಕ್ತ 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು 5 ಪ್ರತಿ ಬಯೋಡೇಟಾ, ವಿದ್ಯಾರ್ಹತೆಯ ಪ್ರಮಾಣಪತ್ರಗಳು ಹಾಗೂ ಆಧಾರ್ ಸೇರಿದಂತೆ ಮೂಲ ಗುರುತಿನ ಚೀಟಿಯೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಸೆ.19 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಗರದ ಸ್ಟೇಡಿಯಂ ರಸ್ತೆಯಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಸಂದರ್ಶನ ಜರುಗಲಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 7022459064, 8105619020, 7019755147 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











