ಮಂಗಳೂರು: ಕರಾವಳಿ ಭಾಗದ ಸಮಗ್ರ ಅಭಿವೃದ್ಧಿ ಹಾಗೂ ಜನರ ಬಹುದಿನಗಳ ಬೇಡಿಕೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಇಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಆಯೋಜನೆಗೊಂಡಿದೆ.
ರಾಜಧಾನಿ ಬೆಂಗಳೂರು ದಾಟಿ ಜನರ ಬಳಿಗೇ ತೆರಳಿ ಆಡಳಿತ ನೀಡುವ ಉದ್ದೇಶದೊಂದಿಗೆ ಮಂಗಳೂರು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಸರ್ವತೋಮುಖ ಬೆಳವಣಿಗೆಗೆ ಈ ಸಭೆಯಲ್ಲಿ ಭದ್ರ ಬುನಾದಿ ಹಾಕುವ ನಿರೀಕ್ಷೆಯಿದೆ. ಸ್ಥಳೀಯ ಜನರ ಆಶೋತ್ತರಗಳನ್ನು ಈಡೇರಿಸುವ ಮಹತ್ವದ ಯೋಜನೆಗಳು ಹಾಗೂ ಉದ್ಯೋಗಾವಕಾಶಗಳ ಸೃಷ್ಟಿಗೆ ಸಂಬಂಧಿಸಿದಂತೆ ಸಂಪುಟದಲ್ಲಿ ವಿಸ್ತೃತ ಚರ್ಚೆ ನಡೆಯಲಿದೆ.
ಕರಾವಳಿಯ ಸರ್ವತೋಮುಖ ಬೆಳವಣಿಗೆ ಹಾಗೂ ಸ್ಥಳೀಯ ಜನರ ಆಶೋತ್ತರಗಳನ್ನು ಈಡೇರಿಸಲು ಸರ್ಕಾರವೇ ನೇರವಾಗಿ ಮಂಗಳೂರಿಗೆ ಬರುತ್ತಿದೆ. ಇಂದು ನಡೆಯಲಿರುವ ಐತಿಹಾಸಿಕ ರಾಜ್ಯ ಸಚಿವ ಸಂಪುಟ ಸಭೆಯು ಕರಾವಳಿಯ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿ ಹೊಸ ಮುನ್ನುಡಿ ಬರೆಯಲಿದೆ.#CabinetInMangaluru | #ದೃಢಕರ್ನಾಟಕದಸಂಕಲ್ಪ pic.twitter.com/ET3CaW1uE9
— CM of Karnataka (@CMofKarnataka) September 18, 2026
ಕರಾವಳಿಯ ಪ್ರವಾಸೋದ್ಯಮ, ಮೀನುಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಕೈಗಾರಿಕಾ ಕ್ಷೇತ್ರಗಳಿಗೆ ಹೊಸ ಚೈತನ್ಯ ತುಂಬುವ ನಿಟ್ಟಿನಲ್ಲಿ ಸರ್ಕಾರ ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳುವ ಸಾಧ್ಯತೆಯಿದ್ದು, ಇಂದಿನ ಸಚಿವ ಸಂಪುಟ ಸಭೆಯು ಈ ಭಾಗದ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಐತಿಹಾಸಿಕವೆಂದು ಪರಿಗಣಿಸಲಾಗಿದೆ.
ಕರಾವಳಿಯಲ್ಲಿ ಅಭಿವೃದ್ಧಿಯ ಹೊಸ ಅಧ್ಯಾಯ ಆರಂಭಿಸಲು ಸನ್ಮಾನ್ಯ ಮುಖ್ಯಮಂತ್ರಿ ಶ್ರೀ @DKShivakumar ನೇತೃತ್ವದ ಸರ್ಕಾರ ಮುಂದಾಗಿದೆ. ಕರಾವಳಿ ಜನರ ಆಶೋತ್ತರಗಳಿಗೆ ಸ್ಪಂದಿಸಲು, ಇಂದೇ ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಮಂಗಳೂರು, ಉಡುಪಿ, ಉತ್ತರ ಕನ್ನಡ ಸೇರಿದಂತೆ ಇಡೀ ಕರಾವಳಿಯ ಅಭಿವೃದ್ಧಿಗೆ ಹೊಸ ಚೈತನ್ಯ ತುಂಬಿ, ಜನರ… pic.twitter.com/FYwUuHV8cl
— CM of Karnataka (@CMofKarnataka) September 18, 2026













