Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದ ಬರಪೀಡಿತ ತಾಲೂಕುಗಳ ರೈತರಿಗೆ ಬಿಗ್ ರಿಲೀಫ್ : ಅನ್ನದಾತರ ಸಾಲ ಮರುಪಾವತಿಗೆ 12 ತಿಂಗಳ ಕಾಲಾವಕಾಶ

---Advertisement---

ಬೆಂಗಳೂರು.ಸೆಪ್ಟೆಂಬರ್.18: ರಾಜ್ಯದ ಅನ್ನದಾತರನ್ನು ಬರದ ಸಂಕಷ್ಟದಿಂದ ತಪ್ಪಿಸಲು ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದೆ. ಬರಪೀಡಿತ ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ಹೆಚ್ಚುವರಿ ಕಾಲಾವಕಾಶ ನೀಡಲಾಗಿದೆ.

ಕೃಷಿ ಸಾಲಗಳ ಮರುಪಾವತಿ ಅವಧಿಯನ್ನು ವಿಸ್ತರಿಸುವ ಜೊತೆಗೆ, ಸಾಧಾರಣ ಬರವಿದ್ದಲ್ಲಿ 3 ವರ್ಷ ಹಾಗೂ ತೀವ್ರ ಬರವಿದ್ದಲ್ಲಿ 5 ವರ್ಷಗಳವರೆಗೆ ಮರುಪಾವತಿ ಅವಧಿ ವಿಸ್ತರಣೆ ಮತ್ತು ಅಗತ್ಯವಿರುವ ರೈತರಿಗೆ ಹೊಸ ಸಾಲ ಸೌಲಭ್ಯ ಕಲ್ಪಿಸಲಾಗುತ್ತಿದೆ.

ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ), ಹೈನುಗಾರಿಕೆ, ರೇಷ್ಮೆ ಹಾಗೂ ಮೀನುಗಾರಿಕೆ ಸೇರಿದಂತೆ ವಿವಿಧ ಕೃಷಿ ಸಂಬಂಧಿತ ಸಾಲಗಳ ಮರುಪಾವತಿ ಅವಧಿಯನ್ನು ವಿಸ್ತರಿಸಲು ತೀರ್ಮಾನಿಸಲಾಗಿದೆ. ಬರದ ತೀವ್ರತೆಗೆ ಅನುಗುಣವಾಗಿ ಪರಿಹಾರ ಕಲ್ಪಿಸಲಾಗುತ್ತಿದ್ದು, ಸಾಧಾರಣ ಬರವಿದ್ದ ಪ್ರದೇಶಗಳಲ್ಲಿ 3 ವರ್ಷಗಳು ಹಾಗೂ ತೀವ್ರ ಬರ ಪರಿಸ್ಥಿತಿಯಿರುವ ಕಡೆಗಳಲ್ಲಿ ಗರಿಷ್ಠ 5 ವರ್ಷಗಳವರೆಗೆ ಸಾಲ ಮರುಪಾವತಿ ಅವಧಿಯನ್ನು ವಿಸ್ತರಿಸಲು ಕ್ರಮ ಕೈಗೊಳ್ಳಲಾಗಿದೆ.

ಇದರೊಂದಿಗೆ, ಪ್ರಸಕ್ತ ಸಂಕಷ್ಟದ ಸಮಯದಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ಅಡಚಣೆಯಾಗದಂತೆ ನೋಡಿಕೊಳ್ಳಲು, ರೈತರ ತುರ್ತು ಅಗತ್ಯಗಳಿಗೆ ಅನುಗುಣವಾಗಿ ಬ್ಯಾಂಕ್‌ಗಳ ಮೂಲಕ ಹೊಸ ಸಾಲ ಸೌಲಭ್ಯವನ್ನೂ ಒದಗಿಸಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಸರ್ಕಾರದ ಈ ನಿರ್ಧಾರವು ಸಂಕಷ್ಟದಲ್ಲಿರುವ ರಾಜ್ಯದ ರೈತ ಸಮುದಾಯಕ್ಕೆ ದೊಡ್ಡ ಮಟ್ಟದ ನೆಮ್ಮದಿ ತಂದಿದೆ.

 

Join WhatsApp

Join Now

Join Telegram

Join Now