Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸೆ.19ರಂದು ರಾಷ್ಟ್ರೀಯ ಲೋಕ್ ಅದಾಲತ್

---Advertisement---

ಚಿತ್ರದುರ್ಗ. ಸೆ.18: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಇದೇ ಸೆಪ್ಟೆಂಬರ್ 19ರಂದು ಮಧ್ಯಾಹ್ನ 2 ರಿಂದ ಸಂಜೆ 5.30 ರವರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ‘3ನೇ ರಾಷ್ಟ್ರೀಯ ಲೋಕ್ ಅದಾಲತ್’ ಕಾರ್ಯಕ್ರಮ ಆಯೋಜಿಸಲಾಗಿದೆ.

ನ್ಯಾಯಾಲಯಗಳಲ್ಲಿ ಬಾಕಿ ಇರುವ ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ಪರಸ್ಪರ ರಾಜಿ ಸಂಧಾನದ ಮೂಲಕ ತಕ್ಷಣವೇ ಬಗೆಹರಿಸಿಕೊಳ್ಳಲು ಸಾರ್ವಜನಿಕರಿಗೆ ಈ ಮೂಲಕ ಅವಕಾಶ ಕಲ್ಪಿಸಲಾಗಿದೆ.

ಈ ಲೋಕ್ ಅದಾಲತ್‍ನಲ್ಲಿ ಸಿವಿಲ್ ವ್ಯಾಜ್ಯಗಳು, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯ (ಬೌನ್ಸ್) ಪ್ರಕರಣಗಳು, ಕಾರ್ಮಿಕ ವಿವಾದಗಳು, ಭೂಸ್ವಾಧೀನ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ, ಬ್ಯಾಂಕ್ ವಸೂಲಾತಿ, ಕಂದಾಯ, ಮೋಟಾರ್ ವಾಹನ ಅಪಘಾತ ಹಾಗೂ ವೇತನ ಮತ್ತು ಪಿಂಚಣಿ ಸಂಬಂಧಿತ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.
ರಾಜಿಯಾಗುವ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಪಾವತಿಸಿದ ಶುಲ್ಕವನ್ನು ಸಂಪೂರ್ಣವಾಗಿ ಮರುಪಾವತಿ ಮಾಡಲಾಗುತ್ತದೆ. ಅಲ್ಲದೆ, ಇಲ್ಲಿನ ತೀರ್ಪಿನ ವಿರುದ್ಧ ಯಾವುದೇ ಮೇಲ್ಮನವಿಗೆ ಅವಕಾಶವಿಲ್ಲದೆ ಪ್ರಕರಣಗಳು ಸಂಪೂರ್ಣವಾಗಿ ಬಗೆಹರಿಯಲಿವೆ. ಸಾರ್ವಜನಿಕರು ಈ ಅವಕಾಶದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಸಮೀರ್ ಪಿ.ನಂದ್ಯಾಲ್ ತಿಳಿಸಿದ್ದಾರೆ.
============

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now