ಬೆಂಗಳೂರು: ವಕೀಲ ಜಗದೀಶ್ ಅವರಿಗೆ ನಗರದ ಸೆಷನ್ಸ್ ಕೋರ್ಟ್ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ.
ಇತ್ತೀಚೆಗೆ ಸಿಟಿ ಸಿವಿಲ್ ಕೋರ್ಟ್ನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದರು.
ಕೊಲೆ ಬೆದರಿಕೆ ಹಾಗೂ ಕೊಲೆ ಯತ್ನ ಮತ್ತಿತರೆ ಆರೋಪಗಳ ಆಧಾರದ ಮೇರೆಗೆ ಹಲಸೂರು ಗೇಟ್ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿ ಜಗದೀಶ್ ಅವರನ್ನು ಫೆ.14ರಂದು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.