ಮಂಗಳೂರು.ಸೆಪ್ಟೆಂಬರ್.19 : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಮಂಗಳೂರಿನ ಮೀನುಗಾರಿಕಾ ಬಂದರಿಗೆ ಭೇಟಿ ನೀಡಿದ್ದಾರೆ.
ಬಂದರಿನಲ್ಲಿ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಸಿಎಂ ಡಿ.ಕೆ.ಶಿವಕುಮಾರ್ ಮೀನುಗಾರರೊಂದಿಗೆ ಸಂವಾದ ನಡೆಸಿ, ಅವರ ಸಮಸ್ಯೆಗಳು, ಅಗತ್ಯತೆಗಳು ಹಾಗೂ ಜೀವನೋಪಾಯದ ಸ್ಥಿತಿಗತಿಗಳ ಕುರಿತು ಮಾಹಿತಿ ಪಡೆದು, ಅಗತ್ಯ ಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ.
ಕಡಲ ಮಕ್ಕಳ ರಕ್ಷಣೆಗೆ ಸರ್ಕಾರ ಬದ್ಧ
ಮಂಗಳೂರಿನ ಮೀನುಗಾರಿಕಾ ಬಂದರಿಗೆ ಇಂದು ಭೇಟಿ ನೀಡಿ, ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಲಾಯಿತು. ಜೊತೆಗೆ ಮೀನುಗಾರರೊಂದಿಗೆ ಸಂವಾದ ನಡೆಸಿ, ಅವರ ಸಮಸ್ಯೆಗಳು, ಅಗತ್ಯತೆಗಳು ಹಾಗೂ ಜೀವನೋಪಾಯದ ಸ್ಥಿತಿಗತಿಗಳ ಕುರಿತು ಮಾಹಿತಿ ಪಡೆದು, ಅಗತ್ಯ… pic.twitter.com/szvfewfGEO
— DK Shivakumar (@DKShivakumar) September 19, 2026

ಇನ್ನು ಮೀನುಗಾರರು ಪ್ರೀತಿಯಿಂದ ಅಂಜಲ್ ಮೀನನ್ನು ಉಡುಗೊರೆಯಾಗಿ ನೀಡಿದ್ದು ವಿಶೇಷವಾಗಿತ್ತು. ಈ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಮುಖಂಡರು ಜೊತೆಗಿದ್ದರು.











