ಚಿತ್ರದುರ್ಗ: ತಾಲೂಕಿನ ಭರಮಸಾಗರದಲ್ಲಿ ಗ್ಯಾಸ್ ಸಿಲಿಂಡರ್ನಿಂದ ಅನಿಲ ಸೋರಿಕೆಯಾಗಿ ಟೀ ಸ್ಟಾಲ್ಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟುಹೋದ ಘಟನೆ ಶನಿವಾರ (ಸೆ.19) ಬೆಳಗ್ಗೆ ನಡೆದಿದೆ.ಭರಮಸಾಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಪಕ್ಕದಲ್ಲಿದ್ದ ಟೀ ಸ್ಟಾಲ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.
ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಿಸಿಕೊಂಡಿದ್ದು, ಟೀ ಸ್ಟಾಲ್ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ.ಬೆಂಕಿಯ ತೀವ್ರತೆಗೆ ಅಂಗಡಿಯಲ್ಲಿದ್ದ ವಸ್ತುಗಳೆಲ್ಲವೂ ಸುಟ್ಟು ಕರಕಲಾಗಿವೆ. ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯರು ಆತಂಕಗೊಂಡಿದ್ದು, ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.











