ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ ಸೆ. 19 : ಕೆನಡಾದಲ್ಲಿ ನಡೆಯಲಿರುವ ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್ಷಿಪ್ಗೆ ಭಾರತ ತಂಡದಿಂದ ವಿಜಯಪುರ ಜಿಲ್ಲೆಯ ತಿಗಣೆ ಬೀದರ ಗ್ರಾಮದ ಸಚಿನ್ ತುಕಾರಾಮ್ ಸಾಲೊಂಕೆ ಆಯ್ಕೆಯಾಗಿದ್ದು, ಅಲ್ಲಿಗೆ ಹೋಗಲು ಆರ್ಥಿಕ ತೊಂದರೆಯಿದ್ದು ಅದನ್ನು ಅರಿತ ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಚಾಂಪಿಯನ್ಷಿಪ್ನಲ್ಲಿ ಪಾಲ್ಗೊಳ್ಳಲು ಅವರಿಗೆ ಅಗತ್ಯವಾದ ಆರ್ಥಿಕ ನೆರವು ನೀಡಿದ್ದಾರೆ.
ವಿಜಯಪುರ ಜಿಲ್ಲೆಯ ತಿಗಣೆ ಬೀದರ ಗ್ರಾಮದ ಸಚಿನ್ ತುಕಾರಾಮ್ ಸಾಲೊಂಕೆ ಪ್ರತಿಷ್ಠಿತ ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್ಷಿಪ್ಗೆ ಭಾರತ ತಂಡಕ್ಕೆ ಅಧಿಕೃತವಾಗಿ ಆಯ್ಕೆಯಾಗಿದ್ದಾರೆ. ಕೆನಡಾದಲ್ಲಿ ಸೆಪ್ಟೆಂಬರ್ 17ರಂದು ಆರಂಭವಾಗಿರುವ ಅಂತಾರಾಷ್ಟ್ರೀಯ ಚಾಂಪಿಯನ್ಷಿಪ್ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ. ಈ ಚಾಂಪಿಯನ್ಷಿಪ್ ಸೆ. 27ರವರೆಗೆ ನಡೆಯಲಿದ್ದು, ಇದರಲ್ಲಿ ಭಾಗವಹಿಸಲು ಅವರು ತೆರಳಲಿದ್ದಾರೆ.
ಗ್ರಾಮೀಣ ಹಿನ್ನೆಲೆಯಿಂದ ಬಂದ ಸಚಿನ್ ಸೌಲಭ್ಯಗಳ ಕೊರತೆಯ ನಡುವೆಯೂ ಸ್ವಂತ ಪರಿಶ್ರಮದಿಂದ ಅಭ್ಯಾಸ ನಡೆಸಿ ಈ ಮೈಲಿಗಲ್ಲು ತಲುಪಿದ್ದಾರೆ. ಕ್ರೀಡಾಪಟುವಿನ ಸಂಕಷ್ಟ ಅರಿತು ಬೆಂಗಳೂರಿಗೆ ಕರೆಯಿಸಿ ಕೊಂಡ ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಚಾಂಪಿಯನ್ಷಿಪ್ನಲ್ಲಿ ಪಾಲ್ಗೊಳ್ಳಲು ಅಗತ್ಯ ಆರ್ಥಿಕ ನೆರವು ನೀಡಿದ್ದಾರೆ. ಈ ಸಂದರ್ಭದಲ್ಲಿ ಸೈಯದ್ ಮೋಹಿದ್ದೀನ್ ಇದ್ದರು.











