Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೊಗಳೇರಹಟ್ಟಿಯಲ್ಲಿ ಗಣೇಶ ಮೆರವಣಿಗೆ ವಿವಾದ; ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

 

ಸುದ್ದಿಒನ್, ಚಿತ್ರದುರ್ಗ , ಸೆಪ್ಟೆಂಬರ್. 19 : ತಾಲ್ಲೂಕಿನ ತುರುವನೂರು ಹೋಬಳಿ ಬೊಗಳೇರಹಟ್ಟಿಯ ಭೋವಿ ಜನಾಂಗದವರು ನಾಯಕ ಸಮಾಜಕ್ಕೆ ಸೇರಿದವರು ನಮ್ಮ ಮೇಲೆ ದೌರ್ಜನ್ಯವೆಸಗಿ ಅಚಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆಂದು ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿ ಪತ್ರಾಂಕಿತ ಕಚೇರಿ ಸಹಾಯಕರಿಗೆ ಮನವಿ ಸಲ್ಲಿಸಿದರು.

ಭೋವಿ ಕಾಲೋನಿಯಲ್ಲಿ ಕೂರಿಸಿದ್ದ ಗಣಪತಿಯನ್ನು ಶುಕ್ರವಾರ ಮೆರವಣಿಗೆ ಮಾಡುವ ಸಂದರ್ಭದಲ್ಲಿ ಭೋವಿ ಕಾಲೋನಿ ಪಕ್ಕದಲ್ಲಿಯೇ ಇರುವ ನಾಯಕ ಸಮಾಜಕ್ಕೆ ಸೇರಿದ ಮಹಂತೇಶ, ಪ್ರಹ್ಲಾದ, ಸುನಿಲ್, ರವಿ, ನವೀನ, ಸುಭಾಷ್, ಅರುಣ, ಸುರೇಶ, ರಾಜು ಇನ್ನು ಅನೇಕರು ಮೆರವಣಿಗೆಗೆ ಅಡ್ಡಿಪಡಿಸಿ ಕೆಟ್ಟ ಶಬ್ದಗಳನ್ನು ಬಳಕೆ ಮಾಡಿ ಅವಮಾನಿಸಿದ್ದಾರೆ. ಗ್ರಾಮದಲ್ಲಿ ಅಶಾಂತಿಗೆ ಕಾರಣರಾಗಿರುವ ಇವರುಗಳ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ನಮ್ಮ ಕರ್ನಾಟಕ ಸೇನೆ ಜಿಲ್ಲಾಧ್ಯಕ್ಷ ಟಿ.ರಮೇಶ್‍ಬೆಳಗಟ್ಟ ಒತ್ತಾಯಿಸಿದರು.

ರಘು, ಬಸವ, ಮಲ್ಲೇಶ, ರಘುವೀರ, ಹರೀಶ, ರಾಜು, ಈರಮ್ಮ, ದುಗ್ಗಮ್ಮ, ಹನುಮಕ್ಕ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now