Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭದ್ರಾ ಮೇಲ್ದಂಡೆ ಯೋಜನೆ: ನವೆಂಬರ್-ಡಿಸೆಂಬರ್ ವೇಳೆಗೆ 17 ಟಿಎಂಸಿ ನೀರು ಲಿಫ್ಟ್ ಮಾಡಲು ಸಂಕಲ್ಪ : ಸಚಿವ ಎನ್. ಚಲುವರಾಯಸ್ವಾಮಿ

---Advertisement---

ಸುದ್ದಿಒನ್, ಹಿರಿಯೂರು, ಸೆಪ್ಟೆಂಬರ್. 20 : ಚಿತ್ರದುರ್ಗ ಜಿಲ್ಲೆಯ ಬಹುದಿನಗಳ ಕನಸಾದ ಭದ್ರಾ ಮೇಲ್ದಂಡೆ ಯೋಜನೆಯ 17 ಟಿಎಂಸಿ ನೀರನ್ನು ನವೆಂಬರ್ ಅಥವಾ ಡಿಸೆಂಬರ್ ವೇಳೆಗೆ ಲಿಫ್ಟ್ ಮಾಡಲು ಸರ್ಕಾರ ಬದ್ಧವಾಗಿದ್ದು, ಯಾವುದೇ ಕಾರಣಕ್ಕೂ ಈ ಕಾಮಗಾರಿಯನ್ನು ವಿಳಂಬ ಮಾಡುವುದಿಲ್ಲ ಎಂದು ಸಚಿವ ಎನ್. ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು.

ಹಿರಿಯೂರು ತಾಲ್ಲೂಕಿನ ಆದಿರಾಳು ಗ್ರಾಮದ ಗೋಕಟ್ಟೆ ಬಳಿ ಭದ್ರಾ ನೀರಿಗೆ ಬಾಗಿನ ಅರ್ಪಿಸಿ, ಗಂಗಾಪೂಜೆ ನೆರವೇರಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿಗಳಾದ ಎಸ್. ನಿಜಲಿಂಗಪ್ಪ ಅವರ ಕನಸು ಹಾಗೂ ಎಸ್.ಎಂ. ಕೃಷ್ಣ ಅವರ ಕಾಲದಲ್ಲಿ ಪ್ರಾರಂಭ ಮಾಡಿದ ಈ ಯೋಜನೆಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರದಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದೆ. ಜಿಲ್ಲೆಯ ಶಾಸಕರ ನಿರಂತರ ಪ್ರಯತ್ನ ಹಾಗೂ ಒತ್ತಾಸೆಯಿಂದಾಗಿ ಇಂದು ನೀರು ಹರಿದಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಈ ಹಿನ್ನೆಲೆಯಲ್ಲಿ ಯೋಜನೆಗೆ ಅಧಿಕೃತವಾಗಿ ಪೂಜೆ ಸಲ್ಲಿಸಲು ಸೆಪ್ಟೆಂಬರ್ 24ರಂದು ಮುಖ್ಯಮಂತ್ರಿಗಳು ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಮುಂದುವರಿದು ಮಾತನಾಡಿದ ಅವರು, 17 ಟಿಎಂಸಿ ನೀರನ್ನು ಲಿಫ್ಟ್ ಮಾಡುವ ವಿಚಾರದಲ್ಲಿ ಅರಣ್ಯ ಇಲಾಖೆಯ ಅನುಮತಿಯಾಗಲಿ ಅಥವಾ ಹಣಕಾಸಿನ ಸಮಸ್ಯೆಗಳಾಗಲಿ ಎದುರಾದರೂ ಅವುಗಳನ್ನು ಸಮರ್ಥವಾಗಿ ಬಗೆಹರಿಸಿ ನೀರು ಒದಗಿಸುವುದು ನಮ್ಮ ಸಂಕಲ್ಪವಾಗಿದೆ. ಈ ಯೋಜನೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವುದೇ ತಮ್ಮ ಮೊದಲ ಆದ್ಯತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now