Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಯಲು ಸೀಮೆಗೆ ಹರಿದ ಭದ್ರೆ : ಹಿರಿಯೂರಿನಲ್ಲಿ ಭೋವಿ ಸಮಾಜದಿಂದ ‘ಸಿಹಿ ಸಂಭ್ರಮ

---Advertisement---

ಸುದ್ದಿಒನ್, ಹಿರಿಯೂರು, ಸೆಪ್ಟೆಂಬರ್. 20 :  ಭದ್ರಾ ನೀರು ಹರಿದ ಹಿನ್ನೆಲೆಯಲ್ಲಿ ಹಿರಿಯೂರಿನಲ್ಲಿ ಭೋವಿ ಸಮಾಜದಿಂದ ‘ಸಿಹಿ ಸಂಭ್ರಮ’ ಆಚರಣೆಯ ಅಂಗವಾಗಿ ಕರ್ನಾಟಕ ರಾಜ್ಯದ ಭಾರಿ ಮತ್ತು ಮಧ್ಯಮ ನೀರಾವರಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರಿಗೆ ಭಾನುವಾರ ಆದಿರಾಳು ಗ್ರಾಮದ ಬಳಿ ಸಿಹಿ ನೀಡಿ ಭೋವಿ ಸಮಾಜದ ಜಿಲ್ಲಾಧ್ಯಕ್ಷ ಹಾಗೂ ಹಿರಿಯೂರು ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷರು‌ ಟಿ. ಕೃಷ್ಣಮೂರ್ತಿ ಅವರು ಮಾತನಾಡಿದರು.

ತೀವ್ರ ಬರಗಾಲಕ್ಕೆ ತುತ್ತಾಗುತ್ತಿದ್ದ ಮಧ್ಯ ಕರ್ನಾಟಕದ ಚಿತ್ರದುರ್ಗ ಜಿಲ್ಲೆಗೆ ದಶಕಗಳ ಕನಸಾಗಿದ್ದ ಭದ್ರಾ ನೀರು ತಲುಪಿರುವ ಹಿನ್ನೆಲೆಯಲ್ಲಿ, ಚಿತ್ರದುರ್ಗ ಜಿಲ್ಲಾ ಭೋವಿ ಗುರುಪೀಠ ಹಾಗೂ ಭೋವಿ ಸಮಾಜದ ವತಿಯಿಂದ ಜಿಲ್ಲಾದ್ಯಂತ ‘ಸಿಹಿ ಸಂಭ್ರಮ’ ಕಾರ್ಯಕ್ರಮವನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗಿದೆ.

ಕಳೆದ 100 ವರ್ಷಗಳಲ್ಲಿ ಬರೋಬ್ಬರಿ 73 ವರ್ಷ ಭೀಕರ ಬರಗಾಲವನ್ನು ಕಂಡ ಇತಿಹಾಸ ಚಿತ್ರದುರ್ಗಕ್ಕಿದೆ. ಬೇಸಿಗೆಯಲ್ಲಿ ನೀರು ಮತ್ತು ಆಹಾರವಿಲ್ಲದೆ ಮಾನವಷ್ಟೇ ಅಲ್ಲದೆ ಪ್ರಾಣಿ-ಪಕ್ಷಿಗಳು ಬೀದಿಗಳಲ್ಲಿ ಸಾಯುವಂತಹ ಪರಿಸ್ಥಿತಿ ಇತ್ತು. ಆದರೆ ಈಗ ಭದ್ರಾ ನೀರು ಹರಿಯುವ ಮೂಲಕ ಜಿಲ್ಲೆಯ ಜನರ ಸಂಕಷ್ಟಗಳಿಗೆ ಪರಿಹಾರ ದೊರೆತಂತಾಗಿದೆ. ಚಿತ್ರದುರ್ಗ ತನ್ನ ಕಹಿ ಇತಿಹಾಸವನ್ನು ಬಿಟ್ಟು, ಹೊಸ ಸಮೃದ್ಧಿಯ ಇತಿಹಾಸಕ್ಕೆ ಸಾಕ್ಷಿಯಾಗುತ್ತಿದೆ” ಎಂದು ಹರ್ಷ ವ್ಯಕ್ತಪಡಿಸಿದರು. ಜನರ ಬದುಕಿನಲ್ಲಿ ನಿರಂತರವಾಗಿ ಸಿಹಿ ನೆಲೆಸಲಿ ಹಾಗೂ ಮುಂದಿನ ದಿನಗಳಲ್ಲಿ ಆಹಾರ ಮತ್ತು ಕುಡಿಯುವ ನೀರಿಗೆ ಕೊರತೆಯಾಗದಿರಲಿ ಎಂದು ಆಶಿಸಿದ ಅವರು, ಈ ಯೋಜನೆಯ ಸಾಕಾರಕ್ಕೆ ಶ್ರಮಿಸಿದ ಮುಖ್ಯಮಂತ್ರಿಗಳಿಗೆ, ಇಂಜಿನಿಯರ್‌ಗಳಿಗೆ ಹಾಗೂ ನಿರಂತರವಾಗಿ ಧ್ವನಿ ಎತ್ತಿದ ಹೋರಾಟಗಾರರಿಗೆ ಸಮಾಜದ ಪರವಾಗಿ ಅಭಿನಂದನೆ ಸಲ್ಲಿಸಿದರು.

ನಗರಸಭೆಯ ಮಾಜಿ ಅಧ್ಯಕ್ಷರಾದ ಚಂದ್ರಶೇಖರ್,
ಮಾಜಿ ಗ್ರಾಮ ಪಂಚಾಯತಿ ಸದಸ್ಯ ಭೂತೇಶ್, ದಾಸಣ್ಣನ ಮಾಳಿಗೆ ಮೂರ್ತಿ, ಭೋವಿ ಸಮಾಜದ ಮುಖಂಡರಾದ ರಾಜು, ರಾಮಣ್ಣ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now