ಸುದ್ದಿಒನ್, ಚಿತ್ರದುರ್ಗ,ಸೆಪ್ಟೆಂಬರ್. 21 : ನಗರದ ಜೆಸಿಆರ್ ಬಡಾವಣೆಯ ನಿವಾಸಿ, ಅ.ಭಾ.ಶ.ಸಾ.ಪ ರಾಜ್ಯ ಉಪಾಧ್ಯಕ್ಷರು, ಕಸಾಪ ಮಾಜಿ ಜಿಲ್ಲಾಧ್ಯಕ್ಷರು, ಬಾಪೂಜಿ ಸಮೂಹ ಶಿಕ್ಷಣ ಸಂಸ್ಥೆಯ ಸ್ಥಾಪಕರಾದ ಡಾ.ಕೆ.ಎಂ.ವೀರೇಶ್ (66 ವರ್ಷ) ಭಾನುವಾರ (ದಿ:20-09-2026 ರಂದು) ರಾತ್ರಿ 9 ಗಂಟೆಗೆ ಹೃದಯಾಘಾತದಿಂದ ನಿಧನರಾದರು.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಶಿಕ್ಷಣ ಪ್ರೇಮಿ, ಕಲಾ, ಸಾಹಿತ್ಯ, ಜನಾನುರಾಗಿ, ಸಂಸ್ಕೃತಿ ಚಿಂತಕರಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ, ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನಗಳನ್ನು ಚಿತ್ರದುರ್ಗದಲ್ಲಿ ಯಶಸ್ವಿಯಾಗಿ ನೆರವೇರಿಸಿದ್ದರು.
ಅಂತಿಮ ದರ್ಶನಕ್ಕೆ ಪಿಳ್ಳೆಕೆರೇನಹಳ್ಳಿಯ ಬಾಪೂಜಿ ವಿದ್ಯಾಸಂಸ್ಥೆಯ ಶಾಲಾ ಆವರಣದಲ್ಲಿ ಸೋಮವಾರ (ದಿ:21-09-2026) ಬೆಳಿಗ್ಗೆ 07 ಗಂಟೆಗೆ ವ್ಯವಸ್ಥೆ ಮಾಡಲಾಗಿದ್ದು, ಅಂತ್ಯಕ್ರಿಯೆ ಮಧ್ಯಾಹ್ನ 3 ಗಂಟೆ ನಂತರ ಕೂಡ್ಲಿಗಿ ತಾಲ್ಲೂಕಿನ ಕಾನಾಮಡುಗು ಗ್ರಾಮದ ತೋಟದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.










