Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೆ. ಎಂ. ವೀರೇಶ್ ಅಗಲಿಕೆ: ಶ್ರೀ ಜಗದ್ಗುರು ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಸಂತಾಪ

---Advertisement---

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 21 :  ಬಾಪೂಜಿ ವಿದ್ಯಾಸಂಸ್ಥೆಯ ಹಿರಿಯ ದೀವಿಗೆ, ಶರಣ ಸಾಹಿತ್ಯದ ಹರಿಕಾರ ಹಾಗೂ ನಾಡಿನ ಸಾಂಸ್ಕೃತಿಕ ಕೊಂಡಿಯಾಗಿದ್ದ ಶರಣ ಚೇತನ ಕೆ. ಎಂ. ವೀರೇಶ್ ಅವರ ಅಗಲಿಕೆಗೆ ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಕೋಟೆಯ ನಾಡಾದ ಚಿತ್ರದುರ್ಗದ ಮಣ್ಣಿನ ಹೆಮ್ಮೆಯ ಮಗನಾಗಿದ್ದ ವೀರೇಶ್ ಅವರು ಬಸವ ತತ್ವದ ಜ್ಯೋತಿಯನ್ನು ಮನೆ ಮನಗಳಲ್ಲಿ ಬೆಳಗಿಸಿದವರು. ಶರಣರ ನಡೆ-ನುಡಿಗಳನ್ನು ತಮ್ಮ ಉಸಿರಾಗಿಸಿಕೊಂಡು ಸಾಹಿತ್ಯ ಲೋಕದಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದರು. ಬಾಪೂಜಿ ವಿದ್ಯಾಸಂಸ್ಥೆಯ ಮೂಲಕ ಜ್ಞಾನದ ದಾರಿಯಲ್ಲಿ ನೂರಾರು ಜನರಿಗೆ ಮಾರ್ಗದರ್ಶಕರಾಗಿದ್ದ ಅವರ ನಿಧನದಿಂದ ಶರಣ ಸಾಹಿತ್ಯ ಹಾಗೂ ಕನ್ನಡ ಸಾಹಿತ್ಯ ಲೋಕವೇ ಶೋಕಸಾಗರದಲ್ಲಿ ಮುಳುಗಿದೆ.

“ವೀರೇಶ್ ಅವರ ಸರಳತೆ, ಸಜ್ಜನಿಕೆ ಹಾಗೂ ಭಾಷಾ ಪ್ರೇಮ ಶಾಶ್ವತವಾದದ್ದು. ಇದೇ ಮಾಸದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಬೆಂಗಳೂರು ಹಾಗೂ ಶಸಾಪ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ‘ಗೊರುಚ ದತ್ತಿ ನಿಧಿ ಪ್ರಶಸ್ತಿ ಪ್ರದಾನ’ ಸಮಾರಂಭದ ಸಾನ್ನಿಧ್ಯ ವಹಿಸಲು ಅವರು ನಮಗೆ ಅವಕಾಶ ಮಾಡಿಕೊಟ್ಟಿದ್ದರು. ಅಲ್ಲದೆ, ರಂಗಸೌರಭ ಕಲಾ ಸಂಘದಿಂದ ಆಯೋಜಿಸಲಾಗಿದ್ದ ಹಿರಿಯ ರಂಗನಿರ್ದೇಶಕ ಚಿದಂಬರರಾವ್ ಜಂಬೆ ಅವರ ‘ರಂಗ ಪುಷ್ಪನಮನ’ ಕಾರ್ಯಕ್ರಮದಲ್ಲಿ ಅವರೊಂದಿಗೆ ಜೊತೆಯಾಗಿದ್ದ ದಿನಗಳೇ ಕೊನೆಯಾಗುತ್ತವೆ ಎಂದು ಭಾವಿಸಿರಲಿಲ್ಲ,” ಎಂದು ಭಾವುಕರಾಗಿ ನೆನಪಿಸಿಕೊಂಡಿದ್ದಾರೆ.

ಅಗಲಿದ ಶರಣ ಚೇತನದ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಕುಟುಂಬವರ್ಗದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಶ್ರೀಗಳು ಭಾವಪೂರ್ಣ ಶ್ರದ್ಧಾಂಜಲಿ ಕೋರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now