Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬರ ಪಟ್ಟಿಯಿಂದ ಜಗಳೂರು ತಾಲೂಕು ಕೈಬಿಟ್ಟಿದ್ದಕ್ಕೆ ಆಕ್ರೋಶ : ಇಂದು ಜಗಳೂರು ಬಂದ್‌ಗೆ ಕರೆ

---Advertisement---

ಜಗಳೂರು: ರಾಜ್ಯ ಸರ್ಕಾರದ ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಜಗಳೂರು ತಾಲೂಕನ್ನು ಕೈಬಿಟ್ಟಿರುವುದನ್ನು ಖಂಡಿಸಿ, ಜಗಳೂರು ಬಿಜೆಪಿ ಘಟಕವು ಇಂದು ಸಂಪೂರ್ಣ ತಾಲೂಕು ಬಂದ್‌ಗೆ ಕರೆ ನೀಡಿದೆ.

ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಜಗಳೂರು ಬಂದ್  ಗೆ ಕರೆ ನೀಡಲಾಗಿದೆ. ಮಾಜಿ ಶಾಸಕರಾದ ಎಸ್.ವಿ. ರಾಮಚಂದ್ರ ಹಾಗೂ ಎಚ್.ಪಿ. ರಾಜೇಶ್ ಅವರ ನೇತೃತ್ವದಲ್ಲಿ ಜಗಳೂರು ಬಂದ್ ಗೆ ಕರೆ ನೀಡಲಾಗಿದೆ. ಮುಂಜಾನೆಯಿಂದಲೇ ಬಂದ್‌ನ ಬಿಸಿ ತಟ್ಟಿದ್ದು, ಸರ್ಕಾರದ ಕ್ರಮದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿದ್ದಾರೆ.

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಶೃಂಗೇರಿ ಪಟ್ಟಣ ಬಂದ್

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣ ಬಂದ್‌ಗೆ ಇಂದು ವಿವಿಧ ಸಂಘಟನೆಗಳು ಕರೆ ನೀಡಿವೆ. ರೈತ ಸಂಘಟನೆಗಳು ಹಾಗೂ ಶೃಂಗೇರಿ ಕ್ಷೇತ್ರ ರೈತ ಒಕ್ಕೂಟ ಸೇರಿದಂತೆ ಹಲವು ಸಂಘಟನೆಗಳ ನೇತೃತ್ವದಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೆ ಪಟ್ಟಣ ಸಂಪೂರ್ಣವಾಗಿ ಸ್ತಬ್ಧವಾಗಿರಲಿದೆ. ಬಂದ್ ಹಿನ್ನೆಲೆಯಲ್ಲಿ ಅಂಗಡಿ-ಮುಂಗಟ್ಟುಗಳು ಮತ್ತು ವ್ಯಾಪಾರ-ವಹಿವಾಟುಗಳು ಸಂಪೂರ್ಣವಾಗಿ ಬಂದ್ ಆಗಿವೆ.

ಕೆಲವು ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪ್ರವಾಸಿಗರು ಯಾವುದೇ ರೀತಿಯ ಪ್ರವಾಸ ಕೈಗೊಳ್ಳದಂತೆ ಹೋರಾಟಗಾರರು ಮನವಿ ಮಾಡಿದ್ದಾರೆ.

Join WhatsApp

Join Now

Join Telegram

Join Now