ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 21 : ಜಿಲ್ಲಾ ಮಟ್ಟದ ಟೈಕೊಂಡೋ ಸ್ಪರ್ಧೆಯಲ್ಲಿ ವಿದ್ಯಾ ವಿಕಾಸ ಅಕಾಡೆಮಿಯ ವಿದ್ಯಾರ್ಥಿನಿಯರು ಅತ್ಯುತ್ತಮ ಪ್ರದರ್ಶನ ನೀಡಿ ಶಾಲೆಗೆ ಕೀರ್ತಿ ತಂದಿದ್ದಾರೆ.
6ನೇ ತರಗತಿಯ ಹಾಸಿನಿ ಗರಪಟ್ಟಿ ಎ. ಅವರು 36–38 ಕೆ.ಜಿ. ವಿಭಾಗದಲ್ಲಿ ಚಿನ್ನದ ಪದಕ ಗೆದ್ದು ಗಮನಾರ್ಹ ಸಾಧನೆ ಮಾಡಿದ್ದಾರೆ. 8ನೇ ತರಗತಿಯ ಸಾನ್ವಿ ವಿ. ಅವರು 44–46 ಕೆ.ಜಿ. ವಿಭಾಗದಲ್ಲಿ ಚಿನ್ನದ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ವಿಜಯಕುಮಾರ್ ಬಿ., ಕಾರ್ಯದರ್ಶಿಗಳಾದ ಶ್ರೀ ಪೃಥ್ವೀಶ ಎಸ್.ಎಂ., ನಿರ್ದೇಶಕರಾದ ಶ್ರೀಮತಿ ಸುನೀತಾ ಪಿ.ಸಿ. ಮತ್ತು ಶ್ರೀಮತಿ ಸ್ನೇಹಾ ಎನ್.ಎಸ್., ಪ್ರಾಂಶುಪಾಲರಾದ ಶ್ರೀ ಪ್ರದೀಶ್ ಕೆ., ಶಿಕ್ಷಕರು ಹಾಗೂ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ವಿದ್ಯಾರ್ಥಿನಿಯರ ಕ್ರೀಡಾ ಪ್ರತಿಭೆಯನ್ನು ಪ್ರೋತ್ಸಾಹಿಸಿದ ಶಾಲೆಯ ದೈಹಿಕ ಶಿಕ್ಷಣ ವಿಭಾಗದ ಪ್ರಯತ್ನಕ್ಕೂ ಮೆಚ್ಚುಗೆ ವ್ಯಕ್ತವಾಗಿದೆ. ಈ ಸಾಧನೆಯು ಇತರ ವಿದ್ಯಾರ್ಥಿಗಳಿಗೂ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆಯಾಗಿದೆ.










