ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 21 : ಜ್ಞಾನ, ಸಂಸ್ಕಾರ ಮತ್ತು ಸಾಂಸ್ಕೃತಿಕ ಪ್ರತಿಭೆಯ ಸಂಗಮಕ್ಷೇತ್ರವಾದ ಸಿರಿಗೆರೆಯ ಮೈಸೂರು ಬಸವಯ್ಯ ವಸತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪರಮಪೂಜ್ಯ ಲಿಂಗೈಕ್ಯ ಜಗದ್ಗುರು ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮೀಜಿಯವರ 35ನೇ ಶ್ರದ್ಧಾಂಜಲಿ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಲಾಗಿದ್ದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಅಭೂತಪೂರ್ವ ಸಾಧನೆ ಮಾಡುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಶ್ರದ್ಧಾಂಜಲಿ ಮಹೋತ್ಸವದ ಪ್ರಯುಕ್ತ ಸೋಮವಾರ ಆಯೋಜಿಸಲಾಗಿದ್ದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳು, ತಮ್ಮ ಶ್ರೇಷ್ಠ ಪ್ರದರ್ಶನದ ಮೂಲಕ ಪ್ರೇಕ್ಷಕರ ಹಾಗೂ ತೀರ್ಪುಗಾರರ ಮೆಚ್ಚುಗೆಗೆ ಪಾತ್ರರಾಗಿ ಈ ಕೆಳಗಿನಂತೆ ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ವಚನ ನೃತ್ಯ : ಪ್ರಥಮ ಸ್ಥಾನ
ಕಿರು ನಾಟಕ : ಪ್ರಥಮ ಸ್ಥಾನ
ಚಿತ್ರಕಲೆ ಸ್ಪರ್ಧೆ : ಪ್ರಥಮ ಸ್ಥಾನ
ಏಕಪಾತ್ರ ಅಭಿನಯ : ಪ್ರಥಮ ಸ್ಥಾನ
ಪ್ರಬಂಧ ಸ್ಪರ್ಧೆ : ಪ್ರಥಮ ಸ್ಥಾನ
ಇಂಗ್ಲಿಷ್ ಸುಂದರ ಕೈಬರಹ : ದ್ವಿತೀಯ ಸ್ಥಾನ
ಕನ್ನಡ ಸುಂದರ ಕೈಬರಹ : ತೃತೀಯ ಸ್ಥಾನ
ರಸಪ್ರಶ್ನೆ ಸ್ಪರ್ಧೆ : ತೃತೀಯ ಸ್ಥಾನ
ಜನಪದ ನೃತ್ಯ : ತೃತೀಯ ಸ್ಥಾನ
ವಿದ್ಯಾರ್ಥಿಗಳ ಈ ಅದ್ಭುತ ಸಾಧನೆಗೆ ಹರ್ಷ ವ್ಯಕ್ತಪಡಿಸಿರುವ ಕಾಲೇಜಿನ ಪ್ರಾಂಶುಪಾಲರು, ನಮ್ಮ ವಿದ್ಯಾರ್ಥಿಗಳು ಕೇವಲ ಅಂಕಗಳಿಕೆಯಲ್ಲಷ್ಟೇ ಅಲ್ಲದೆ, “ಸಾಂಸ್ಕೃತಿಕ ರಂಗದಲ್ಲಿ ನಮ್ಮ ವಿದ್ಯಾರ್ಥಿಗಳು ತೋರಿದ ಈ ಪ್ರತಿಭೆ ಮತ್ತು ಶಿಸ್ತು ಹೆಮ್ಮೆಯ ವಿಷಯ. ಪೂಜ್ಯ ಶ್ರೀಗಳ ಆಶೀರ್ವಾದ ಹಾಗೂ ವಿದ್ಯಾರ್ಥಿಗಳ ಕಠಿಣ ಪರಿಶ್ರಮಕ್ಕೆ ಈ ಗೆಲುವು ಸಾಕ್ಷಿಯಾಗಿದೆ” ಎಂದು ಪ್ರಶಂಸಿದ್ದಾರೆ.
ಸಾಧಕ ವಿದ್ಯಾರ್ಥಿಗಳಿಗೆ, ಅವರಿಗೆ ಸೂಕ್ತ ಮಾರ್ಗದರ್ಶನ ಹಾಗೂ ತರಬೇತಿ ನೀಡಿದ ಉಪನ್ಯಾಸಕ ವೃಂದದವರಿಗೆ ಮತ್ತು ನಿರಂತರವಾಗಿ ಪ್ರೋತ್ಸಾಹಿಸಿದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿವರ್ಗಕ್ಕೆ ಕಾಲೇಜಿನ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.













