Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸೆ.24ರಂದು ಮುಖ್ಯಮಂತ್ರಿಗಳ ಪ್ರವಾಸದಲ್ಲಿ ಬದಲಾವಣೆ ; ಇಲ್ಲಿದೆ ಪರಿಷ್ಕೃತ ಮಾಹಿತಿ..!

ಡಿಕೆ ಶಿವಕುಮಾರ್
---Advertisement---

 

ಸುದ್ದಿಒನ್, ಚಿತ್ರದುರ್ಗ. ಸೆ.22: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇದೇ ಸೆಪ್ಟೆಂಬರ್ 24ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಮುಖ್ಯಮಂತ್ರಿಗಳ ಅಂದು ಬೆಳಿಗ್ಗೆ 11ಕ್ಕೆ ಬೆಂಗಳೂರಿನ ಹೆಚ್‍ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಮಧ್ಯಾಹ್ನ 12ಕ್ಕೆ ಚಿತ್ರದುರ್ಗ ಜಿಲ್ಲೆ ಸಿರಿಗೆರೆ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠಕ್ಕೆ ಆಗಮಿಸಿ, ಶ್ರೀ ಮದುಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ ಶ್ರೀ ತರಳಬಾಳು ಜಗದ್ಗುರು ಶ್ರೀ ಶಿವಕುಮಾರ್ ಶಿವಾಚಾರ್ಯ ಮಹಾಸ್ವಾಮಿಗಳವರ 35ನೇ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 1 : 30 ಕ್ಕೆ ಸಿರಿಗೆರೆಯಿಂದ ಹೊರಟು ಮಧ್ಯಾಹ್ನ 2 ಗಂಟೆಗೆ ಚಿತ್ರದುರ್ಗ ನಗರದ ದಾವಣಗೆರೆ ರಸ್ತೆಯ ಶ್ರೀ ಮಾದಾರ ಚನ್ನಯ್ಯ ಗುರುಪೀಠದ ಪಕ್ಕದ ಮೈದಾನದಲ್ಲಿ ರೈತರ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಶ್ರೀ ಶಿವಶರಣ ಮಾದಾರ ಚನ್ನಯ್ಯ ಗುರುಪೀಠಕ್ಕೆ ಭೇಟಿ ನೀಡುವರು. ಸಂಜೆ 3 : 30 ಕ್ಕೆ ಮುರುಘಾ ಮಠ ಆವರಣದ ಹೆಲಿಪ್ಯಾಡ್‍ನಿಂದ ಬೆಂಗಳೂರಿನ ಹೆಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಸ್.ಶ್ರೀಧರ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now