Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪೌರಕಾರ್ಮಿಕರ ದಿನಾಚರಣೆ:  ಇಂದು ದಾವಣಗೆರೆಯಲ್ಲಿ ಮನೆ ಮನೆ ಕಸ ಸಂಗ್ರಹಣೆ ಇರುವುದಿಲ್ಲ

---Advertisement---

ದಾವಣಗೆರೆ .ಸೆಪ್ಟೆಂಬರ್ 23 :  ದಾವಣಗೆರೆ ಮಹಾನಗರ ಪಾಲಿಕೆಯ ವತಿಯಿಂದ  ಸೆಪ್ಟೆಂಬರ್‌ 23  “ಪೌರಕಾರ್ಮಿಕರ ದಿನಾಚರಣೆ”ಯನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಪೌರಕಾರ್ಮಿಕರು ಹಾಗೂ ಪೌರಸೇವಾ ನೌಕರರಿಗೆ ಸರ್ಕಾರಿ ರಜೆ ಘೋಷಿಸಲಾಗಿದೆ. ಆದ್ದರಿಂದ, ಸೆಪ್ಟೆಂಬರ್‌ 23 ರಂದು ನಗರದಲ್ಲಿ ಮನೆ ಮನೆ ಕಸ ಸಂಗ್ರಹಣೆ ಕಾರ್ಯವು ಲಭ್ಯವಿರುವುದಿಲ್ಲ.

ನಗರದ ನಾಗರಿಕರು ಮನೆಯಲ್ಲಿ ಸಂಗ್ರಹವಾದ ತ್ಯಾಜ್ಯವನ್ನು ಖಾಲಿ ನಿವೇಶನಗಳಲ್ಲಾಗಲಿ ಅಥವಾ ರಸ್ತೆ ಬದಿಗಳಲ್ಲಾಗಲಿ ಎಲ್ಲೆಂದರಲ್ಲಿ ಎಸೆಯದೆ ತಮ್ಮ ಮನೆಯಲ್ಲೇ ಶೇಖರಿಸಿ ಇಡಬೇಕು. ಮರುದಿನ, ಅಂದರೆ ಸೆಪ್ಟೆಂಬರ್‌ 24 ರಂದು ಬರುವ ತ್ಯಾಜ್ಯ ಸಂಗ್ರಹಣಾ ವಾಹನಗಳಿಗೆ ನೀಡುವ ಮೂಲಕ ಮಹಾನಗರ ಪಾಲಿಕೆಯೊಂದಿಗೆ ಸಹಕರಿಸುವಂತೆ ಮಹಾನಗರ ಪಾಲಿಕೆ ಆಯುಕ್ತ ಮಹಾಂತೇಶ್‌ ಅವರು ತಿಳಿಸಿದ್ದಾರೆ.

Join WhatsApp

Join Now

Join Telegram

Join Now