ಬೆಂಗಳೂರು.ಸೆಪ್ಟೆಂಬರ್.23: ಮಹಿಳೆಯರ ಆರ್ಥಿಕ ಮತ್ತು ಸಾಮಾಜಿಕ ಸ್ವಾವಲಂಬನೆಗೆ ಉತ್ತೇಜನ ನೀಡುವ ಉದ್ದೇಶದಿಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಡಿಯಲ್ಲಿ ಬರುವ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು 2026-27ನೇ ಸಾಲಿನ ವಿವಿಧ ಕಲ್ಯಾಣ ಯೋಜನೆಗಳಿಗಾಗಿ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು 2026ರ ಅಕ್ಟೋಬರ್ 31ರ ಸಂಜೆ 5:30 ರವರೆಗೆ ಕಾಲಾವಕಾಶ ನೀಡಲಾಗಿದೆ.
ಪ್ರಮುಖ ಯೋಜನೆಗಳು ಮತ್ತು ಸೌಲಭ್ಯಗಳ ವಿವರ:
ಉದ್ಯೋಗಿನಿ ಯೋಜನೆ
ಉದ್ದೇಶ: ಮಹಿಳೆಯರು ಆದಾಯ ಉತ್ಪನ್ನ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕುಗಳ ಮೂಲಕ ಸಾಲ ಮತ್ತು ನಿಗಮದ ವತಿಯಿಂದ ಸಹಾಯಧನ.
ವಯೋಮಿತಿ: 21 ರಿಂದ 55 ವರ್ಷ.
ಸಾಲದ ಮೊತ್ತ: ಕನಿಷ್ಠ ₹50,000 ರಿಂದ ಗರಿಷ್ಠ ₹3,00,000 ವರೆಗೆ.
ಸಹಾಯಧನ ವಿವರ:
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ: ಆದಾಯ ಮಿತಿ ₹2.00 ಲಕ್ಷ; ಶೇ. 75 ರಷ್ಟು ಅಥವಾ ಗರಿಷ್ಠ ₹2.00 ಲಕ್ಷಗಳವರೆಗೆ ಸಹಾಯಧನ.

ಇತರ ವರ್ಗದವರು: ಆದಾಯ ಮಿತಿ ₹1.50 ಲಕ್ಷ; ಶೇ. 30 ರಷ್ಟು ಅಥವಾ ಗರಿಷ್ಠ ₹90,000 ಗಳವರೆಗೆ ಸಹಾಯಧನ.
ಚೇತನ ಯೋಜನೆ:
ದಮನಿತ ಮಹಿಳೆಯರು ಆದಾಯೋತ್ಪನ್ನ ಚಟುವಟಿಕೆಗಳನ್ನು ಕೈಗೊಳ್ಳಲು ₹45,000 ಪ್ರೋತ್ಸಾಹಧನ ನೀಡಲಾಗುತ್ತದೆ.
ವಯೋಮಿತಿ: 20 ರಿಂದ 55 ವರ್ಷ (ಆನ್‌ಲೈನ್ ಹಾಗೂ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ).
ಧನಶ್ರೀ ಯೋಜನೆ:
ಹೆಚ್.ಐ.ವಿ/ಏಡ್ಸ್ ಸೋಂಕಿತ ಅಥವಾ ಬಾಧಿತ ಮಹಿಳೆಯರ ಸ್ವಯಂ ಉದ್ಯೋಗಕ್ಕೆ ₹45,000 ಪ್ರೋತ್ಸಾಹಧನ.
ವಯೋಮಿತಿ: 20 ರಿಂದ 55 ವರ್ಷ (ಆನ್‌ಲೈನ್ ಹಾಗೂ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ).
ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ:
ಲಿಂಗತ್ವ ಅಲ್ಪಸಂಖ್ಯಾತರು ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ₹45,000 ಪ್ರೋತ್ಸಾಹಧನ.
ವಯೋಮಿತಿ: 20 ರಿಂದ 55 ವರ್ಷ.
ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ:
ಮಾಜಿ ದೇವದಾಸಿ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ₹45,000 ಪ್ರೋತ್ಸಾಹಧನ.
ವಯೋಮಿತಿ: 20 ರಿಂದ 55 ವರ್ಷ.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ನಿಯಮಗಳು
ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ಜೋಡಣೆ (ಲಿಂಕ್) ಮಾಡಿರಬೇಕು ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸಿರಬೇಕು.
ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಅಥವಾ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಬಹುದು.
ಚೇತನ ಮತ್ತು ಧನಶ್ರೀ ಯೋಜನೆಗಳ ಆಫ್‌ಲೈನ್ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಆಯಾ ಜಿಲ್ಲೆಯ ಉಪ ನಿರ್ದೇಶಕರು (ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ) ಅಥವಾ ಅಭಿವೃದ್ಧಿ ನಿರೀಕ್ಷಕರಿಗೆ ಸಲ್ಲಿಸಬೇಕು.
ಈ ಹಿಂದಿನ ಸಾಲುಗಳಲ್ಲಿ ಅರ್ಜಿ ಸಲ್ಲಿಸಿ ಆಯ್ಕೆಯಾಗದವರು ಈ ವರ್ಷ ಮರು ಅರ್ಜಿ ಸಲ್ಲಿಸುವುದು ಕಡ್ಡಾಯ.
ಈಗಾಗಲೇ ನಿಗಮದ ಯಾವುದಾದರೂ ಯೋಜನೆಯಡಿ ಪ್ರಯೋಜನ ಪಡೆದಿದ್ದಲ್ಲಿ, ಪುನಃ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ
ಅರ್ಹರು ತಮ್ಮ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು, ಅಭಿವೃದ್ಧಿ ನಿರೀಕ್ಷಕರನ್ನು ಸಂಪರ್ಕಿಸಬಹುದು ಅಥವಾ ನಿಗಮದ ಅಧಿಕೃತ ವೆಬ್‌ಸೈಟ್ kswdc.karnataka.gov.in ಗೆ ಭೇಟಿ ನೀಡಬಹುದು.

ದೂರವಾಣಿ ಸಂಖ್ಯೆ: 080-26632792 / 080-26632973.


















