Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ಕುಡಿಯುವ ನೀರಿಗೆ 306 ಕೋಟಿ ರೂ. ಅನುದಾನ :ಡಿಸಿಎಂ ಡಾ.ಜಿ.ಪರಮೇಶ್ವರ್ ಮಾಹಿತಿ

---Advertisement---

ಬೆಂಗಳೂರು.ಸೆಪ್ಟೆಂಬರ್. 23 : ರಾಜ್ಯದ ಜನರ ದಾಹ ನೀಗಿಸುವುದು ನಮ್ಮ ಸರ್ಕಾರದ ಮೊದಲ ಆದ್ಯತೆ. ಬರ ಪರಿಸ್ಥಿತಿಯ ನಡುವೆಯೂ ರಾಜ್ಯದ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಏಪ್ರಿಲ್–ಮೇ ಅವಧಿಯಲ್ಲಿ ಜಿಲ್ಲೆಗಳಿಗೆ ₹117 ಕೋಟಿ ಹಾಗೂ ಗ್ರಾಮೀಣ ಪ್ರದೇಶಗಳ ಕುಡಿಯುವ ನೀರಿನ ವ್ಯವಸ್ಥೆಗೆ ₹189 ಕೋಟಿ ಅನುದಾನ ನೀಡಿದ್ದು, ಒಟ್ಟಾರೆ ₹306 ಕೋಟಿ ಅನುದಾನವನ್ನು ಒದಗಿಸಲಾಗಿದೆ ಎಂದು ಹೇಳಿದ್ದಾರೆ.

ನೀರಿನ ಕೊರತೆಯಿಂದ ಯಾವುದೇ ಕುಟುಂಬ ಸಂಕಷ್ಟಕ್ಕೆ ಸಿಲುಕಬಾರದು ಎಂಬ ಉದ್ದೇಶದಿಂದ, ಅಗತ್ಯವಿರುವ ಕಡೆಗಳಲ್ಲಿ ತಕ್ಷಣದ ನೀರು ಪೂರೈಕೆ ಹಾಗೂ ಪರ್ಯಾಯ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ.ಜನರ ಬದುಕಿಗೆ ಅತ್ಯಗತ್ಯವಾದ ಕುಡಿಯುವ ನೀರಿನ ಪೂರೈಕೆಗೆ ನಮ್ಮ  ಸರ್ಕಾರ ಸದಾ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

 

Join WhatsApp

Join Now

Join Telegram

Join Now