ಸುದ್ದಿಒನ್, ಬೆಂಗಳೂರು, ಸೆಪ್ಟೆಂಬರ್. 23 : ರಾಜ್ಯ ಸರ್ಕಾರವು ಚಿತ್ರದುರ್ಗಕ್ಕೆ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕುಶಾಲ್ ಚೌಕ್ಸೆ ನೇಮಕ ಮಾಡಿ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಮಹತ್ವದ ಆದೇಶ ಹೊರಡಿಸಿದೆ. ಪ್ರಸ್ತುತ ಬೆಂಗಳೂರಿನ ಆಡಳಿತ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿ (ಡಿಸಿಪಿ) ಸೇವೆ ಸಲ್ಲಿಸುತ್ತಿದ್ದ 2018ರ ಬ್ಯಾಚ್ನ ಐಪಿಎಸ್ ಅಧಿಕಾರಿ ಕುಶಾಲ್ ಚೌಕ್ಸೆ ಅವರನ್ನು ಚಿತ್ರದುರ್ಗ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಎಸ್ಪಿ) ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾವಣೆ ಮಾಡಲಾಗಿದೆ.

ಚಿತ್ರದುರ್ಗದ ಎಸ್ಪಿಯಾಗಿದ್ದ ರಂಜಿತ್ ಕುಮಾರ್ ಬಂಡಾರು ಅವರ ಸ್ಥಾನಕ್ಕೆ ಕುಶಾಲ್ ಚೌಕ್ಸೆ ಅವರನ್ನು ನಿಯೋಜಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸಂಜಯ್ ಬಿ.ಎಸ್. ಅವರು ರಾಜ್ಯಪಾಲರ ಆದೇಶದ ಮೇರೆಗೆ ಈ ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ.










