ಚಿತ್ರದುರ್ಗ: ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ವಿವಿಧ ಸಾಲ ಹಾಗೂ ಸಹಾಯಧನ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದ್ದು, ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಈ ಗಡುವು ಅನ್ವಯಿಸುವುದಿಲ್ಲ ಎಂದು ತಿಳಿಸಲಾಗಿದೆ.ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಯೋಜನೆಗಳಿಗೆ ಸಂಬಂಧಿಸಿದ ಅರ್ಹತೆ, ಅಗತ್ಯ ದಾಖಲೆಗಳು ಹಾಗೂ ಇತರ ನಿಯಮಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.ಅರ್ಜಿ ಆಯ್ಕೆ ಪ್ರಕ್ರಿಯೆಯಲ್ಲಿ ಮಹಿಳೆಯರಿಗೆ 33%, ಅಂಗವಿಕಲರಿಗೆ 5% ಹಾಗೂ ತೃತೀಯ ಲಿಂಗಿಗಳಿಗೆ 1% ವಿಶೇಷ ಮೀಸಲಾತಿ ಕಲ್ಪಿಸಲಾಗಿದೆ.
ಸಾಲ ಮತ್ತು ಸಹಾಯಧನ ಯೋಜನೆಗಳ ಕುರಿತು ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ಪ್ರಕ್ರಿಯೆಗೆ ಸಂಬಂಧಿಸಿದ ವಿವರಗಳಿಗಾಗಿ 7899899039 ಅಥವಾ 080-22374848 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಎಚ್.ಸಿ. ಸಾತ್ವಿಕ್ ತಿಳಿಸಿದ್ದಾರೆ.











