ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 24 : : ಸಿರಿಗೆರೆಯ ಬೃಹನ್ಮಠದಲ್ಲಿ ಆಯೋಜಿಸಲಾಗಿದ್ದ ತರಳಬಾಳು ಜಗದ್ಗುರು ಶ್ರೀ 1108 ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 35ನೆಯ ಶ್ರದ್ಧಾಂಜಲಿ ಸಮಾರಂಭವು ಜರುಗಿತು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಿ’ತರಳಬಾಳು ಹುಣ್ಣಿಮೆ’ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ್ದಾರೆ.
ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಚಿತ್ರದುರ್ಗದ ಸಿರಿಗೆರೆಯ ಬೃಹನ್ಮಠದಲ್ಲಿ ನಡೆದ ತರಳಬಾಳು ಜಗದ್ಗುರು ಶ್ರೀ 1108 ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 35ನೆಯ ಶ್ರದ್ದಾಂಜಲಿ ಸಮಾರಂಭದಲ್ಲಿ ಗುರುವಾರ ಪಾಲ್ಗೊಂಡು ಮಾತನಾಡಿದರು.
ಈ ಸಂದರ್ಭದಲ್ಲಿ ‘ತರಳಬಾಳು ಹುಣ್ಣಿಮೆ’ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು. ಸಮಾರಂಭದಲ್ಲಿ ತರಳಬಾಳು ಮಠದ ಪೀಠಾಧಿಪತಿಗಳಾದ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು, ಸಾಣೇಹಳ್ಳಿಯ ತರಳಬಾಳು ಶಾಖಾಮಠದ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು, ಸಚಿವರಾದ ಬಸವಂತಪ್ಪ, ಚಲುವರಾಯಸ್ವಾಮಿ, ಕೆ ಹೆಚ್ ಮುನಿಯಪ್ಪ, ಟಿ. ರಘುಮೂರ್ತಿ, ಸಂಸದ ಬಸರಾಜ ಬೊಮ್ಮಾಯಿ, ಶಾಸಕರಾದ ಯುಬಿ ಬಣಕಾರ, ಡಾ.ಎಂ ಚಂದ್ರಪ್ಪ, ಶಿವಗಂಗ ಬಸವರಾಜ್, ಡಿಜಿ ಶಾಂತನಗೌಡ, ಹೆಚ್ ಡಿ ತಮ್ಮಯ್ಯ, ಬಿ.ದೇವೇಂದ್ರಪ್ಪ, ವಿಧಾನಪರಿಷತ್ ಸದಸ್ಯ ಸಿ ಟಿ ರವಿ, ಮಾಜಿ ಕೇಂದ್ರ ಸಚಿವ ಜಿ.ಎಂ ಸಿದ್ದೇಶ್, ಶ್ರೀಮತ್ ಸಾಧು ಸದ್ದರ್ಮ ವೀರಶೈವ ಸಂಘದ ಅಧ್ಯಕ್ಷರು ಎಚ್ ಆರ್ ಬಸವರಾಜಪ್ಪ ಮತ್ತಿತರರು ಉಪಸ್ಥಿತರಿದ್ದರು.










