ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 25 : ಶಿವಶರಣೆ ಹೇಮರಡ್ಡಿ ಮಲ್ಲಮ್ಮ ವೀರಶೈವ ಲಿಂಗಾಯತ ರಡ್ಡಿ ಸಮಾಜ ಬೆಂಗಳೂರು ಹಾಗೂ ಧಾರವಾಡ ಜಿಲ್ಲಾ ಘಟಕದ ವತಿಯಿಂದ ರಾಜ್ಯ ಮಟ್ಟದ ಅಭಿನಂದನಾ ಸಮಾರಂಭ ಸೆ.27 ರಂದು ಬೆಳಿಗ್ಗೆ 10-30 ಕ್ಕೆ ಹುಬ್ಬಳ್ಳಿ-ಧಾರವಾಡ ವೀರೇಂದ್ರ ಹೆಗಡೆ ಕಲಾ ಕ್ಷೇತ್ರದಲ್ಲಿ ನಡೆಯಲಿದೆ.
ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ನಡೆಯುವ ಅಭಿನಂದನಾ ಸಮಾರಂಭದಲ್ಲಿ ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್.ಪಾಟೀಲ, ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಇವರುಗಳನ್ನು ಸನ್ಮಾನಿಸಲಾಗುವುದು.

ಚಿತ್ರದುರ್ಗ ಜಿಲ್ಲೆಯ ವೀರಶೈವ ಲಿಂಗಾಯತ ಹೇಮರಡ್ಡಿ ಮಲ್ಲಮ್ಮ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸುವಂತೆ ಜಿಲ್ಲಾ ವೀರಶೈವ ಲಿಂಗಾಯತ ಹೇಮರಡ್ಡಿ ಮಲ್ಲಮ್ಮ ಸಮಾಜದ ಅಧ್ಯಕ್ಷರಾದ ಡಾ.ಎಲ್.ಪಾಲಾಕ್ಷಯ್ಯ, ಪ್ರಧಾನ ಕಾರ್ಯದರ್ಶಿ ಡಿ.ಟಿ.ಶಿವಾನಂದಪ್ಪ ಇವರುಗಳು ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೊ : 9008861111, 9448423229 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.










