ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧ ಮುಂದುವರೆದಿದೆ. ಈ ಸಂಬಂಧ ಭಾರತದ ಪ್ರಧಾನಿ ಮೋದಿ ಎರಡು ರಾಷ್ಟ್ರದ ಅಧ್ಯಕ್ಷರ ಜೊತೆಗೆ ಮಾತನಾಡಲಿದ್ದಾರೆ ಎನ್ನಲಾಗಿದೆ. ಇಂದು ಮಧ್ಯಾಹ್ನ, ದೂರವಾಣಿ ಕರೆ ಮಾಡಿ ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್ ಜೊತೆ ಪ್ರಧಾನಿ ಮೋದಿ ಚರ್ಚೆ ಮಾಡಲಿದ್ದಾರಂತೆ. ಈ ವೇಳೆ ರಷ್ಯಾ ಉಕ್ರೇನ್ ನಡುವಿನ ಯುದ್ಧದ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
ಇನ್ನು ಇಂದು ಮಧ್ಯಾಹ್ನವೇ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಜೊತೆಯಲ್ಲೂ ಕರೆ ಮಾಡಿ ಮಾತನಾಡಲಿರುವ ಪ್ರಧಾನಿ ಮೋದಿ, ಯುದ್ಧದ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಇನ್ನು ರಷ್ಯಾ, ಉಕ್ರೇನ್ ನ 4 ನಗರಗಳಲ್ಲಿ ತಾತ್ಕಾಲಿಕ ಕದನ ವಿರಾಮ ಘೋಷಿಸಲಿದೆ. ಉಕ್ರೇನ್ ರಾಜಧಾನಿ ಕೀವ್, ಖಾರ್ಕಿವ್, ಸುಮಿ, ಮರಿಯಪೋಲ್ ನಗರದಲ್ಲಿ ಕದನ ವಿರಾಮವನ್ನ ಘೋಷಣೆ ಮಾಡಲಿದ್ದು, ಕೀವ್ ನಗರದ ಹೊರವಲಯದಲ್ಲಿ ಫೈರಿಂಗ್ ನಡೆಸಲಿದೆ. ಭಾರತೀಯ ಕಾಲಮಾನ ಮಧ್ಯಾಹ್ನ 12.30ಕ್ಕೆ ಕದನ ವಿರಾಮ ಘೋಷಣೆ ಮಾಡಲಿದೆ ಎನ್ನಲಾಗಿದೆ.