Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದ ಪೌರಕಾರ್ಮಿಕರ ಉಪಹಾರ ಭತ್ಯೆ 70 ರೂ.ಗೆ ಏರಿಕೆ : ಸಿಎಂ ಡಿಕೆ ಶಿವಕುಮಾರ್ ಘೋಷಣೆ

---Advertisement---

ಬೆಂಗಳೂರು.ಸೆಪ್ಟೆಂಬರ್ 26 : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪೌರಕಾರ್ಮಿಕರಿಗೆ ಸಿಹಿಸುದ್ದಿ ನೀಡಿದ್ದು, ಪೌರ ಕಾರ್ಮಿಕರ ಬೆಳಗಿನ ಉಪಹಾರ ಭತ್ಯೆಯನ್ನು 35 ರೂ.ನಿಂದ 70 ರೂ. ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪೌರಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಡಿ.ಕೆ. ಶಿವಕುಮಾರ್ ಅವರು, ಪೌರಕಾರ್ಮಿಕರ ಶ್ರಮಕ್ಕೆ ಗೌರವ, ಅವರ ಬದುಕಿಗೆ ಭದ್ರತೆ ಹಾಗೂ ಮಕ್ಕಳ ಭವಿಷ್ಯಕ್ಕೆ ಭರವಸೆ ನೀಡುವ ನಿಟ್ಟಿನಲ್ಲಿ ಹಲವು ಮಹತ್ವದ ಯೋಜನೆಗಳನ್ನು ಘೋಷಿಸಿದ್ದೇವೆ ಎಂದು ಹೇಳಿದ್ದಾರೆ.

ನೇರ ಪಾವತಿ ಪೌರಕಾರ್ಮಿಕರಿಗೆ ಹೊಸದಾಗಿ ಪ್ರತಿ ತಿಂಗಳು ₹5,000 ವಿಶೇಷ ಭತ್ಯೆ, ಬೆಳಗಿನ ಉಪಹಾರ ಭತ್ಯೆ ₹35ರಿಂದ ₹70ಕ್ಕೆ ಹೆಚ್ಚಳ ಹಾಗೂ ಖಾಯಂ ಪೌರಕಾರ್ಮಿಕರಿಗೆ ನೀಡುವ ವಿಶೇಷ ಭತ್ಯೆ ₹7,000ರಿಂದ ₹10,000ಕ್ಕೆ ಹೆಚ್ಚಿಸುವುದರ ಜೊತೆಗೆ ಪೌರಕಾರ್ಮಿಕರ ಮಕ್ಕಳಿಗಾಗಿ ಕೆಪಿಎಸ್ ಮಾದರಿಯಲ್ಲಿ ವಸತಿ ಶಾಲೆ ನಿರ್ಮಿಸಲು ತೀರ್ಮಾನಿಸಲಾಗಿದ್ದು, ಈ ಮೂಲಕ ಪೌರಕಾರ್ಮಿಕರ ಕಲ್ಯಾಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

Join WhatsApp

Join Now

Join Telegram

Join Now