ಮೈಸೂರು: ಜನೌಷಧ ಕೇಂದ್ರಗಳಿಂದ ಸಾಕಷ್ಟು ಬಡಜನರಿಗೂ ಸಹಾಯವಾಗಿದೆ. ಬಡಜನರಿಗೂ ಕಡಿಮೆ ದರದಲ್ಲಿ ಬೇಕಾದ ಔಷಧಗಳು ಸಿಗಲಿ ಎಂಬ ಕಾರಣಕ್ಕಾಗಿಯೇ ಕೇಂದ್ರ ಸರ್ಕಾರ ಜನೌಷಧ ಕೇಂದ್ರಗಳನ್ನ ತೆರೆಯಲು ಹೆಚ್ಚೆಚ್ಚು ಒತ್ತು ನೀಡಿದೆ.
ಇದೀಗ ಇಂದು ಜನೌಷಧ ಕಾರ್ಯಕ್ರಮದಲ್ಲಿ ಸಚಿವ ಸುಧಾಕರ್ ಪಾಲ್ಗೊಂಡು ಮಾತನಾಡಿದ್ದಾರೆ. ಮೈಸೂರಿನ ಸದರ್ನ್ ಸ್ಟಾರ್ ಹೋಟೆಲ್ ನಲ್ಲಿ ಜನ ಔಷಧಿ ದಿನದ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ಸಚಿವ ಡಾ. ಕೆ. ಸುಧಾಕರ್ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಭಾಷಣಕ್ಕೆ ಮೊದಲು ಜನ ಔಷಧಿ ಕೇಂದ್ರಗಳ ಫಲಾನುಭವಿಗಳು ಮತ್ತು ಕೇಂದ್ರಗಳ ಮಾಲೀಕರನ್ನು ಉದ್ದೇಶಿಸಿ ಮಾತನಾಡಿದರು.
ವೈದ್ಯರಿಗೆ ಈ ವೇಳೆ ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ. ಸರ್ಕಾರಿ ವೈದ್ಯರು ಖಾಸಗಿ ಕಂಪನಿ ಔಷಧಿ ಬರೆದರೆ ಕ್ರಮ ತೆಗೆದುಕೊಳ್ಳಲಾಗುತ್ತೆ. ಜನೌಷಧ ಕೇಂದ್ರಗಳಲ್ಲಿ ಉತ್ತಮ ಗುಣಮಟ್ಟದ ಔಷಧ ಲಭ್ಯವಿದೆ. ಮುಂದಿನ ದಿನಗಳಲ್ಲಿ ಗ್ರಾಮಮಟ್ಟದಲ್ಲೂ ಜನೌಷಧ ಕೇಂದ್ರ ತೆರೆಯಲಾಗುತ್ತೆ ಎಂದು ತಿಳಿಸಿದ್ದಾರೆ.