ನವದೆಹಲಿ: ಸದ್ಯ ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧ ನಡೆಯುತ್ತಿದೆ. ಈ ಯುದ್ಧದಲ್ಲಿ ಉಕ್ರೇನ್ ನಲ್ಲಿ ಸಾಕಷ್ಟು ಸಾವು ನೋವು ಸಂಭವಿಸಿದೆ. ಆದ್ರೆ ರಷ್ಯಾ ವಿರುದ್ಧ ಪುಟ್ಟ ದೇಶ ಉಕ್ರೇನ್ ಅಷ್ಟೇ ಸ್ಟ್ರಾಂಗ್ ಆಗಿ ನಿಂತಿದೆ.
ಈ ಮಧ್ಯೆ ಭಾರತದ ಪ್ರಧಾನಿ ಮೋದಿ ಇಂದು ಎರಡು ದೇಶದ ಅಧ್ಯಕ್ಷರ ಜೊತೆ ಮಾತುಕತೆ ನಡೆಸುವುದಾಗಿ ಹೇಳಿದ್ದರು. ಅದರಂತೆ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಜೊತೆ ದೂರವಾಣಿ ಕರೆಯಲ್ಲಿ ಮಾತನಾಡಿದ್ದಾರೆ. ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಜೊತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿರುವ ಮೋದಿ, ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಸುಮಾರು 35 ನಿಮಿಷಗಳ ಕಾಲ ಪ್ರಧಾನಿ ಮೋದಿ ಮತ್ತು ಝೆಲೆನ್ಸ್ಕಿ ಚರ್ಚೆ ನಡೆಸಿದ್ದಾರೆ. ರಷ್ಯಾ ಮತ್ತು ಉಕ್ರೇನ್ ನಡುವೆ ನೇರ ಮಾತುಕತೆಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಎರಡೂ ದೇಶಗಳ ಮಾತುಕತೆಗಳ ಪ್ರಧಾನಿ ಮೋದಿ ಪ್ರಶಂಸೆ ವ್ಯಕ್ತಪಡಿಸಿದ್ರು, ಉಕ್ರೇನ್ ನಿಂದ ಭಾರತೀಯರ ಸ್ಥಳಾಂತರಕ್ಕೆ ಸಹಾಕಾರ ಹಿನ್ನೆಲೆ
ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿಗೆ ಪ್ರಧಾನಿ ಮೋದಿ ಧನ್ಯವಾದ ತಿಳಿಸಿದ್ದಾರೆ.