Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬಂಧನ

---Advertisement---

 

ಹುಬ್ಬಳ್ಳಿ: 2013ರಲ್ಲಿ ಕಳಸಾ-ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ನಡೆದ ರೈತರ ಪ್ರತಿಭಟನೆ ವೇಳೆ ರೈಲು ತಡೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.ಪ್ರಕರಣದಲ್ಲಿ ಅವರ ವಿರುದ್ಧ ವಾರಂಟ್ ಜಾರಿಯಾಗಿತ್ತು.

ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ರೈಲ್ವೆ ಪೊಲೀಸ್ ಪಡೆ (ಆರ್‌ಪಿಎಫ್) ಅಧಿಕಾರಿಗಳು ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.2013ರಲ್ಲಿ ಕಳಸಾ-ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ನಡೆದ ಪ್ರತಿಭಟನೆ ವೇಳೆ ಸುಮಾರು ಆರು ಗಂಟೆಗಳ ಕಾಲ ರೈಲು ತಡೆ ನಡೆಸಲಾಗಿತ್ತು.

ಈ ಸಂಬಂಧ ಆರ್‌ಪಿಎಫ್ ಪ್ರಕರಣ ದಾಖಲಿಸಿತ್ತು. ಪ್ರಕರಣದ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ವಾರಂಟ್ ಜಾರಿಯಾಗಿತ್ತು ಎಂದು ತಿಳಿದುಬಂದಿದೆ.ಬಂಧನದ ಬಳಿಕ ಅವರನ್ನು ಹುಬ್ಬಳ್ಳಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಬಳಿಕ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now