Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರ ಬೋಧಕೇತರ ಕೆಲಸಕ್ಕೆ ಬ್ರೇಕ್ : ಗುಣಮಟ್ಟದ ಶಿಕ್ಷಣಕ್ಕೆ ಐತಿಹಾಸಿಕ ಹೆಜ್ಜೆ

---Advertisement---

ಬೆಂಗಳೂರು.ಸೆಪ್ಟೆಂಬರ್. 25 : ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಶಿಕ್ಷಕರನ್ನು ಕೇವಲ ಪಠ್ಯ ಬೋಧನೆಗಷ್ಟೇ ಸೀಮಿತಗೊಳಿಸುವ ನಿಟ್ಟಿನಲ್ಲಿ, ಅವರನ್ನು ಯಾವುದೇ ಬೋಧಕೇತರ ಕೆಲಸಗಳಿಗೆ ನಿಯೋಜಿಸದಂತೆ ತಡೆಯಲು ಪ್ರತ್ಯೇಕ ಕಾಯ್ದೆ ರೂಪಿಸಲು ಸರ್ಕಾರ ಮುಂದಾಗಿದೆ.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ಖಾತರಿಪಡಿಸಲು ಹಾಗೂ ಶಿಕ್ಷಕರ ಕೊರತೆಯನ್ನು ನೀಗಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಶಿಕ್ಷಕರನ್ನು ಕೇವಲ ಪಠ್ಯ ಬೋಧನೆಗಷ್ಟೇ ಸೀಮಿತಗೊಳಿಸುವ ನಿಟ್ಟಿನಲ್ಲಿ, ಅವರನ್ನು ಯಾವುದೇ ಬೋಧಕೇತರ ಕೆಲಸಗಳಿಗೆ ನಿಯೋಜಿಸದಂತೆ ತಡೆಯಲು ಪ್ರತ್ಯೇಕ ಕಾಯ್ದೆ ರೂಪಿಸಲು ಸರ್ಕಾರ ಮುಂದಾಗಿದೆ.

ಈ ಕುರಿತು ಮುಂಬರುವ ಬಜೆಟ್ ಅಧಿವೇಶನದಲ್ಲಿ ಅಧಿಕೃತ ಮಸೂದೆಯನ್ನು ಮಂಡಿಸಲು ಸಿದ್ಧತೆಗಳು ನಡೆದಿವೆ. ಕಾಯ್ದೆ ಜಾರಿಗೆ ಬಂದ ಬಳಿಕ ಚುನಾವಣೆ ಕೆಲಸ, ಜನಗಣತಿ ಸೇರಿದಂತೆ ಯಾವುದೇ ರೀತಿಯ ಬೋಧಕೇತರ ಕರ್ತವ್ಯಗಳಿಗೆ ಶಿಕ್ಷಕರನ್ನು ಬಳಸಿಕೊಳ್ಳುವುದನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗುತ್ತದೆ. ಶಿಕ್ಷಕರ ಮೇಲಿನ ಅನಗತ್ಯ ಕೆಲಸದ ಒತ್ತಡವನ್ನು ನಿವಾರಿಸಿ, ಶೈಕ್ಷಣಿಕ ಕ್ಷೇತ್ರದಲ್ಲಿ ಸಮಗ್ರ ಸುಧಾರಣೆ ತರುವುದೇ ಈ ಐತಿಹಾಸಿಕ ಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಲಾಗಿದೆ.

Join WhatsApp

Join Now

Join Telegram

Join Now