Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

---Advertisement---

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದೂ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಉತ್ತರ ಕನ್ನಡ, ಹಾವೇರಿ, ಬಳ್ಳಾರಿ, ವಿಜಯನಗರ, ಗದಗ, ಕೊಪ್ಪಳ, ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಮುಂದಿನ ಕೆಲವೇ ಗಂಟೆಗಳಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ಮುಂಬರುವ ದಿನಗಳಲ್ಲೂ ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿಯಲಿದ್ದು, ಬುಧವಾರದಂದು ಬಳ್ಳಾರಿ, ಚಾಮರಾಜನಗರ, ಮಂಡ್ಯ, ಮೈಸೂರು ಹಾಗೂ ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಹಾಗೆಯೇ ಅಕ್ಟೋಬರ್ 4ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಅಕ್ಟೋಬರ್ 5ರಂದೂ ಸಹ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ