Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ: ಲಾರಿಗೆ ಬಸ್ ಡಿಕ್ಕಿ; ಚಾಲಕ ಸ್ಥಳದಲ್ಲೇ ಸಾವು

---Advertisement---

 

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 02 : ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕೆಎಸ್ಆರ್ಟಿಸಿ ಬಸ್ ಅಪ್ಪಳಿಸಿದ ಪರಿಣಾಮ, ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಏಳು ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಕಣಿವೆ ಆಂಜನೇಯ ದೇವಸ್ಥಾನದ ಬಳಿ ಗುರುವಾರ ಬೆಳಿಗ್ಗೆ ನಡೆದಿದೆ.

ಮೃತ ಚಾಲಕನನ್ನು ನಾಗರಾಜ್ ನಾಯ್ಕ್ (50 ವರ್ಷ) ಎಂದು ಗುರುತಿಸಲಾಗಿದೆ. ಈ ಬಸ್ ಚಿತ್ರದುರ್ಗ ನಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಮುಂದೆ ಚಲಿಸುತ್ತಿದ್ದ ಲಾರಿಗೆ ಬಸ್ ಲಾರಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಅಪಘಾತದಲ್ಲಿ ಗಾಯಗೊಂಡವರನ್ನು ಶೋಭಾ (50), ವಿಜಯಕುಮಾರ್ (50), ಎಸ್. ಜಗದೀಶ್ (52), ಸಣ್ಣತಿಮ್ಮಪ್ಪ (54), ಮಹಾಲಿಂಗಪ್ಪ (36), ಅಟ್ಟೆಪ್ಪ (54) ಹಾಗೂ ಪ್ರಸನ್ನ ಎಂದು ಗುರುತಿಸಲಾಗಿದ್ದು, ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಸಂಬಂಧ ಚಿತ್ರದುರ್ಗ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now