ದಾವಣಗೆರೆ : ನಗರದ ಹೈಸ್ಕೂಲ್ ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ‘ಹಿಂದೂ ಮಹಾ ಗಣಪತಿ’ ಮೂರ್ತಿಯ ವಿಸರ್ಜನಾ ಮೆರವಣಿಗೆ ಹಿನ್ನೆಲೆಯಲ್ಲಿ, ಸಾರ್ವಜನಿಕರ ಅನುಕೂಲ ಹಾಗೂ ಕಾನೂನು-ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಅಕ್ಟೋಬರ್ 3, 2026 ರಂದು ಬೆಳಿಗ್ಗೆ 10:00 ಗಂಟೆಯಿಂದ ರಾತ್ರಿ 11:00 ಗಂಟೆಯವರೆಗೆ ವಾಹನ ಸಂಚಾರ ಮಾರ್ಗಗಳಲ್ಲಿ ತಾತ್ಕಾಲಿಕ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಆದೇಶ ಹೊರಡಿಸಿದ್ದಾರೆ.
ಹರಿಹರದಿಂದ ದಾವಣಗೆರೆಗೆ ಬರುವ ಸರಕು ಲಾರಿಗಳು, ಕೆ.ಎಸ್.ಆರ್.ಟಿ.ಸಿ ಹಾಗೂ ಖಾಸಗಿ ಬಸ್‌ಗಳು ಹರಿಹರ ನಗರದಿಂದ ದಾವಣಗೆರೆ ಕಡೆಗೆ ಬರುವ ಹಳೆ ಪಿ.ಬಿ. ರಸ್ತೆಗೆ ಬರದೇ, ನೇರವಾಗಿ ಶಿವಮೊಗ್ಗ ಬೈಪಾಸ್ ಮುಖಾಂತರ ಹೊಸ ಎನ್.ಹೆಚ್-48 ರಸ್ತೆ ಮೂಲಕ ಅವರಗೆರೆ ಹತ್ತಿರದ ಬಾಡಾ ಕ್ರಾಸ್ ಮುಖಾಂತರ ಬಂದು, ಸರಕು ಲಾರಿಗಳು ಡಿಸಿಎಂ ಅಂಡರ್ ಪಾಸ್ ಹತ್ತಿರದ ದನದ ಮಾರ್ಕೆಟ್ ಕ್ರಾಸ್ ಮುಖಾಂತರ ಎಪಿಎಂಸಿಗೆ ಹೋಗುವುದು. ಬಾಡಾ ಕ್ರಾಸ್ ಮುಖಾಂತರ ಅವರಗೆರೆ ಕಡೆಯಿಂದ ನೂತನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಬಂದು, ನಂತರ ಅದೇ ಮಾರ್ಗವಾಗಿ ಬೆಂಗಳೂರು ಹಾಗೂ ಬೆಳಗಾವಿ ಕಡೆಗೆ ಹೋಗುವುದು.
ಸರಕು ಲಾರಿಗಳು: ಡಿಸಿಎಂ ಅಂಡರ್ ಪಾಸ್ ಹತ್ತಿರದ ದನದ ಮಾರ್ಕೆಟ್ ಕ್ರಾಸ್ ಮುಖಾಂತರ ಎಪಿಎಂಸಿಗೆ ಹೋಗುವುದು. ಬಾಡಾ ಕ್ರಾಸ್ ಮುಖಾಂತರ ಅವರಗೆರೆ ಮಾರ್ಗವಾಗಿ ನೂತನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಬಂದು, ನಂತರ ಅದೇ ಮಾರ್ಗವಾಗಿ ಬೆಂಗಳೂರು ಹಾಗೂ ಬೆಳಗಾವಿ ಕಡೆಗೆ ಹೋಗುವುದು. ಖಾಸಗಿ ಬಸ್‌ಗಳು ಎ.ಪಿ.ಎಂ.ಸಿ ಮಾರ್ಕೆಟ್‌ಗೆ ಬಂದು ಪ್ರಯಾಣಿಕರನ್ನು ಇಳಿಸಿ/ಹತ್ತಿಸಿಕೊಂಡು ಪುನಃ ಅದೇ ಮಾರ್ಗದಲ್ಲಿ ಹೋಗುವುದು.

ಚನ್ನಗಿರಿ ಕಡೆಯಿಂದ ಬರುವ ಕೆ.ಎಸ್.ಆರ್.ಟಿ.ಸಿ ಬಸ್‌ಗಳು ಹದಡಿ ಅಂಡರ್ ಬ್ರಿಡ್ಜ್ ಮೂಲಕ ಬಾಡಾ ಕ್ರಾಸ್ ನಿಂದ ಅವರಗೆರೆ ಮಾರ್ಗವಾಗಿ ನೂತನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಬಂದು ಮರಳುವುದು. ಖಾಸಗಿ ಬಸ್‌ಗಳು ಮಾಗನೂರು ಬಸಪ್ಪ ಪೆಟ್ರೋಲ್ ಬಂಕ್ ಹತ್ತಿರದ ಮೈದಾನದಲ್ಲಿ ಪಾರ್ಕಿಂಗ್ ಮಾಡುವುದು. ಸರಕು ಲಾರಿಗಳು ಎ.ಪಿ.ಎಂ.ಸಿ ಮಾರ್ಕೆಟ್‌ನಲ್ಲಿ ಬಂದು ಪಾರ್ಕಿಂಗ್ ಮಾಡುವುದು.
ಜಗಳೂರು ಕಡೆಯಿಂದ ಬರುವ ಕೆ.ಎಸ್.ಆರ್.ಟಿ.ಸಿ ಬಸ್‌ಗಳು: ಬೆತೂರು ರಸ್ತೆ , ಆರ್‌ಎಂಸಿ ಫ್ಲೈ ಓವರ್ ಮೂಲಕ ನೂತನ ಬಸ್ ನಿಲ್ದಾಣಕ್ಕೆ ಬಂದು ಮರಳುವುದು. ಖಾಸಗಿ ಬಸ್‌ಗಳು ಜಗಳೂರು ಖಾಸಗಿ ಬಸ್ ನಿಲ್ದಾಣಕ್ಕೆ ಬಂದು ಅದೇ ಮಾರ್ಗವಾಗಿ ಮರಳುವುದು. ಸರಕು ಲಾರಿಗಳು ವೆಂಕಟೇಶ್ವರ ಸರ್ಕಲ್ ಹಾಗೂ ಗಣೇಶ ಹೋಟೆಲ್ ಸರ್ಕಲ್ ಮುಖಾಂತರ ಎ.ಪಿ.ಎಂ.ಸಿ ಮಾರ್ಕೆಟ್ ತಲುಪಿ ಪಾರ್ಕಿಂಗ್ ಮಾಡುವುದು.
ಹರಪನಹಳ್ಳಿ ಕಡೆಯಿಂದ ಕೆ.ಎಸ್.ಆರ್.ಟಿ.ಸಿ ಬಸ್‌ಗಳು ಕಂಚಿಕರೆ, ಬೆಂಡಿಗೆರೆ ಮಾರ್ಗವಾಗಿ ದಾವಣಗೆರೆ ನಗರಕ್ಕೆ ಬಂದು, ವೆಂಕಟೇಶ್ವರ ಸರ್ಕಲ್, ಗಣೇಶ ಹೋಟೆಲ್ ಸರ್ಕಲ್ ಹಾಗೂ ಆರ್‌ಎಂಸಿ ಫ್ಲೈ ಓವರ್ ಮೂಲಕ ನೂತನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಬಂದು ಮರಳುವುದು. ಖಾಸಗಿ ಬಸ್‌ಗಳು ಜಗಳೂರು ಖಾಸಗಿ ಬಸ್ ನಿಲ್ದಾಣಕ್ಕೆ ಬಂದು ಅದೇ ಮಾರ್ಗವಾಗಿ ಮರಳುವುದು. ಸರಕು ಲಾರಿಗಳು ವೆಂಕಟೇಶ್ವರ ಸರ್ಕಲ್, ಗಣೇಶ ಹೋಟೆಲ್ ಸರ್ಕಲ್ ಮುಖಾಂತರ ಎ.ಪಿ.ಎಂ.ಸಿ ಮಾರ್ಕೆಟ್‌ನಲ್ಲಿ ಪಾರ್ಕಿಂಗ್ ಮಾಡುವುದು.
ಜಿಎಂಐಟಿ ಕಾಲೇಜ್ ಹತ್ತಿರ ತಾತ್ಕಾಲಿಕ ರಸ್ತೆ ಬದಿಯಲ್ಲಿ ಗೂಡ್ಸ್ ಲಾರಿಗಳನ್ನು ನಿಲ್ಲಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಖಾಸಗಿ ಪಾರ್ಕಿಂಗ್ ವ್ಯವಸ್ಥೆ ಮಾಡಿಕೊಳ್ಳಲು ಖಾಸಗಿ ಲಾರಿ ಮಾಲೀಕರ ಸಂಘ ಹಾಗೂ ಆರ್‌ಟಿಒ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಅಕ್ಟೋಬರ್ 03 ರಂದು ರಂದು ಬೆಳಿಗ್ಗೆ 10:00 ಗಂಟೆಯಿಂದ ರಾತ್ರಿ 11:00 ಗಂಟೆಯವರೆಗೆ. ನೂತನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ಬಾತಿಕೆರೆವರೆಗೆ ಹಳೆ ಪಿ.ಬಿ ರಸ್ತೆಯಲ್ಲಿ ಯಾವುದೇ ಸರ್ಕಾರಿ, ಖಾಸಗಿ ಬಸ್‌ಗಳು ಹಾಗೂ ಭಾರಿ ಮತ್ತು ಲಘು ಸರಕು ಸಾಗಣೆ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅಗತ್ಯ ಸೂಚನಾ ಫಲಕಗಳನ್ನು ಸೂಚಿತ ಸ್ಥಳಗಳಲ್ಲಿ ಅಳವಡಿಸಲು ಪೊಲೀಸ್ ಇಲಾಖೆಗೆ ನಿರ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಆದೇಶಿಸಿದ್ದಾರೆ.










