Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿಂದುಳಿದ ವರ್ಗದವರಿಗೆ ಸಿಹಿಸುದ್ದಿ :  ವಿವಿಧ ಅಭಿವೃದ್ಧಿ ನಿಗಮಗಳ ಯೋಜನೆಗಳ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

---Advertisement---

ಬಳ್ಳಾರಿ :ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಸೇರಿದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯ ವಿವಿಧ ನಿಗಮಗಳಿಂದ 2026-27ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳ ಸಾಲ ಸೌಲಭ್ಯಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಅಕ್ಟೋಬರ್ 15ರವರೆಗೆ ವಿಸ್ತರಿಸಲಾಗಿದೆ.

ಯಾವೆಲ್ಲಾ ನಿಗಮಗಳ ಯೋಜನೆಗಳು ಅನ್ವಯ?

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ, ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ, ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ, ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ.

ಈ ಹಿಂದೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿತ್ತು. ಇದೀಗ ದಿನಾಂಕ ವಿಸ್ತರಣೆಯಾಗಿದ್ದು, ಆಸಕ್ತ ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಅಥವಾ ಸಮೀಪದ ಗ್ರಾಮ ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ನೂತನ ಜಿಲ್ಲಾಡಳಿತ ಭವನದಲ್ಲಿರುವ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಚೇರಿ ಅಥವಾ ದೂರವಾಣಿ ಸಂಖ್ಯೆ 08392-267038 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಟಿ. ಹೊನ್ನೂರಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join WhatsApp

Join Now

Join Telegram

Join Now