ದಾವಣಗೆರೆ : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ, ದಾವಣಗೆರೆ ಜಿಲ್ಲೆಯಾದ್ಯಂತ ಡಿಸೆಂಬರ್ 12 ರಂದು ‘ರಾಷ್ಟ್ರೀಯ ಲೋಕ್-ಅದಾಲತ್’ (National Lok-Adalat) ಅನ್ನು ದಾವಣಗೆರೆ ಜಿಲ್ಲಾ ನ್ಯಾಯಾಲಯದ ಆವರಣ ಹಾಗೂ ತಾಲೂಕು ನ್ಯಾಯಾಲಯಗಳ ಆವರಣದಲ್ಲಿ (ಪ್ರತ್ಯಕ್ಷ ಹಾಗೂ ವರ್ಚುವಲ್ ಮಾದರಿಯಲ್ಲಿ ನಡೆಸಲಾಗುತ್ತದೆ) ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು ಗೌರವನ್ವಿತ ನ್ಯಾ.ಸಿ.ರಂಗೇಗೌಡ ಅವರು ತಿಳಿಸಿದ್ದಾರೆ.
ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಸಾರ್ವಜನಿಕರು, ತಮ್ಮ ಪ್ರಕರಣ ನಡೆಯುತ್ತಿರುವ ನ್ಯಾಯಾಲಯಕ್ಕೆ ರಾಜೀ ಮಾಡಿಕೊಳ್ಳುವ ಕುರಿತು ಮುಂಚಿತವಾಗಿ ತಿಳಿಸುವ ಮೂಲಕ ಅಥವಾ ಅರ್ಜಿ ಸಲ್ಲಿಸುವ ಮೂಲಕ ಕೋರಬಹುದು. ಅಥವಾ ಸಮೀಪದ ದಾವಣಗೆರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು.
ಸಂಪರ್ಕ ಹಾಗೂ ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದೂರವಾಣಿ ಸಂಖ್ಯೆ: 08192-296364 ರಾಷ್ಟ್ರೀಯ ಸಹಾಯವಾಣಿ (NALSA Helpline): 15100 ಅಧಿಕೃತ ವೆಬ್‌ಸೈಟ್ karnataka.nalsa.gov.in ಭೇಟಿ ನೀಡಬಹುದು ಹಾಗೂ QR Code ಸ್ಕ್ಯಾನ್ ಮಾಡುವ ಮೂಲಕ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧಿಕೃತ ಟೆಲಿಗ್ರಾಂ ಚಾನಲ್‌ಗೆ ಛಂದಾದಾರರಾಗಬಹುದು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಗೌರವನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ನ್ಯಾ.ಸಿ.ರಂಗೇಗೌಡ ಅವರು ತಿಳಿಸಿದ್ದಾರೆ.










