ಬೆಂಗಳೂರು : ಕರ್ನಾಟಕ ರಾಜ್ಯವು ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು, ಜನಸಾಮಾನ್ಯರು ತೀವ್ರ ಸಂಕಷ್ಟಕ್ಕೊಳಗಾಗಿದ್ದಾರೆ. NDRF ಮಾನದಂಡಗಳನ್ವಯ ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ.
ಬರ ಅಧ್ಯಯನಕ್ಕೆ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ನೇತೃತ್ವದ ಕೇಂದ್ರದ ಅಂತರ್ ಸಚಿವಾಲಯ ತಂಡದೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಸಮಾಲೋಚನೆ ನಡೆಸಿದ ಪ್ರಮುಖಾಂಶಗಳು ಹೀಗೀವೆ.
ಕರ್ನಾಟಕ ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ 217 ತಾಲ್ಲೂಕುಗಳು ಬರ ಪೀಡಿತವಾಗಿವೆ. ಅದರಲ್ಲಿ ಘೋಷಣೆಯಾಗಿರುವ 177 ತಾಲ್ಲೂಕುಗಳಲ್ಲಿ ಒಟ್ಟು 46,324.50 ಕೋಟಿ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಕರ್ನಾಟಕ ಸರ್ಕಾರ ಮೊದಲ ಹಂತದಲ್ಲಿ 101 ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಿ, 3,701 ಕೋಟಿ ರೂ. ಬರ ಪರಿಹಾರಕ್ಕೆ ಮನವಿ ಮಾಡಿತ್ತು. ಈಗ ಪರಿಷ್ಕೃತ ಪಟ್ಟಿಯಲ್ಲಿ ಘೋಷಣೆಯಾಗಿರುವ 177 ಬರ ಪೀಡಿತ ತಾಲ್ಲೂಕುಗಳಿಗೆ ಒಟ್ಟು 7,142.64 ಕೋಟಿ ರೂ. ಪರಿಹಾರಕ್ಕೆ ಮನವಿ ಮಾಡಲಾಗಿದೆ.
ರಾಜ್ಯಕ್ಕೆ ನ್ಯಾಯಸಮ್ಮತ ಪರಿಹಾರ ದೊರಕಿಸಿ
ಯಾವುದೇ ಒತ್ತಡಗಳಿಗೆ ಜಗ್ಗದೆ, ಕೇಂದ್ರ ಸರ್ಕಾರದ ವಿಪತ್ತು ನಿರ್ವಹಣೆಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಅತ್ಯಂತ ವೈಜ್ಞಾನಿಕವಾಗಿ ಮೌಲ್ಯಮಾಪನ ನಡೆಸಿ ಬರಪೀಡಿತ ತಾಲ್ಲೂಕುಗಳನ್ನು ಘೋಷಿಸಲಾಗಿದೆ.
ರೈತರು ಕಂಗಾಲಾದರೆ ಎಲ್ಲವೂ ಸ್ಥಗಿತಗೊಂಡಂತೆ
ರೈತರು ಕಂಗಾಲಾದರೆ ಎಲ್ಲವೂ ಸ್ಥಗಿತವಾಗುತ್ತದೆ. ಆದ್ದರಿಂದ ಕೇಂದ್ರ ಸರ್ಕಾರವು ರಾಜ್ಯದ ರೈತರ ನೆರವಿಗೆ ಧಾವಿಸಬೇಕು. ನನ್ನ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರ ನಾಲ್ಕು ದಶಕಗಳ ಸಾರ್ವಜನಿಕ ಜೀವನದಲ್ಲಿ ಜನರು ಇಷ್ಟು ತೊಂದರೆಗೊಳಗಾಗಿರುವುದನ್ನು ನೋಡಿಲ್ಲ. ಇದು ಅತ್ಯಂತ ಆಘಾತಕಾರಿ ಪರಿಸ್ಥಿತಿ.
ರಾಜ್ಯದ ಕೃಷ್ಣಾ ಜಲಾನಯನ ಪ್ರದೇಶ ಹೊರತುಪಡಿಸಿ ಎಲ್ಲ ಜಲಾಶಯಗಳಲ್ಲಿ ನೀರಿನ ಹರಿವು ಕಡಿಮೆ ಇದೆ. ಮಲೆನಾಡು, ಕರಾವಳಿ ಪ್ರದೇಶಗಳಲ್ಲಿಯೂ ಮಳೆಯ ತೀವ್ರ ಕೊರತೆಯಾಗಿದೆ. ಆದಾಗ್ಯೂ ಕಾವೇರಿ ನದಿಗೆ ನೀರು ಬಿಡುಗಡೆ ಮಾಡುವಂತೆ ಸಿಡಬ್ಲ್ಯುಸಿ ಆದೇಶ ನೀಡುತ್ತಿದೆ. ನಗರ ಪ್ರದೇಶಗಳಲ್ಲಿಯೂ ನೀರಿನ ಸಮಸ್ಯೆ ಎದುರಾಗಿದೆ. ರೈತರಿಗೆ ರಾಜ್ಯ ಸರ್ಕಾರದ ಹಂತದಲ್ಲಿ 2500 ರೂ. ಪರಿಹಾರ ಮೊತ್ತ ಘೋಷಿಸಲಾಗಿದೆ. ಆದರೆ ಕೇಂದ್ರದಿಂದ ಹೆಚ್ಚಿನ ಸಹಕಾರವನ್ನು ನಿರೀಕ್ಷಿಸುತ್ತಿದ್ದೇವೆ.
ಮುನ್ನೆಚ್ಚರಿಕೆಯ ಕ್ರಮ
ರಾಜ್ಯ ಸರ್ಕಾರದ ಎಲ್ಲ ಸಚಿವರೂ ಜಿಲ್ಲೆಗಳಿಗೆ ಭೇಟಿ ನೀಡಿ ವಸ್ತುಸ್ಥಿತಿ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳೂ ತಮ್ಮ ಇಲಾಖೆಗಳಿಗೆ ಸಂಬಂಧಿಸಿದಂತೆ ಮುನ್ನೆಚ್ಚರಿಕೆ, ಪರಿಹಾರ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಮಾನ್ಯ ಪ್ರಧಾನಮಂತ್ರಿಯವರು ಬರ ಪರಿಸ್ಥಿತಿಯ ಕುರಿತು ರಾಜ್ಯಕ್ಕೆ ಭೇಟಿ ನೀಡಿದಾಗ ಮುನ್ನೆಚ್ಚರಿಕೆ ನೀಡಿದ್ದರು. ಅದರಂತೆ ನಾನು ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದೆನು. ರೈತರಿಗೂ ಬಿತ್ತನೆ ಕುರಿತು ಮಾರ್ಗದರ್ಶನ ನೀಡಲಾಗಿತ್ತು.
ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಕಬ್ಬು ಬೆಳೆಗಾರರು ಹೆಚ್ಚಿನ ಬೆಲೆಗೆ ಒತ್ತಾಯಿಸುತ್ತಿದ್ದಾರೆ. ಅಂತೆಯೇ ಹಾಲು ಉತ್ಪಾದಕರೂ ಕನಿಷ್ಠ 10 ರೂ. ದರ ಏರಿಕೆಗೆ ಒತ್ತಾಯಿಸುತ್ತಿದ್ದಾರೆ. ಈ ಸವಾಲಿನ ಪರಿಸ್ಥಿತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜೊತೆಯಾಗಿ ಕೆಲಸ ಮಾಡೋಣ ಎಂದು ಹೇಳಿದ್ದಾರೆ.
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ
ಇದನ್ನು ಓದಿವ್ಯಾಜ್ಯ ಬಗೆಹರಿಸಿಕೊಳ್ಳಲು ಸಾರ್ವಜನಿಕರಿಗೆ ಸುವರ್ಣಾವಕಾಶ : ಡಿಸೆಂಬರ್ 12 ರಂದು ರಾಷ್ಟ್ರೀಯ ಲೋಕ್ ಅದಾಲತ್ಕರ್ನಾಟಕ ರಾಜ್ಯವು ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು, ಜನಸಾಮಾನ್ಯರು ತೀವ್ರ ಸಂಕಷ್ಟಕ್ಕೊಳಗಾಗಿದ್ದಾರೆ. NDRF ಮಾನದಂಡಗಳನ್ವಯ ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ.
ಕರ್ನಾಟಕ ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ 217 ತಾಲ್ಲೂಕುಗಳು ಬರ ಪೀಡಿತವಾಗಿವೆ.… pic.twitter.com/iWN8OMaenV
— CM of Karnataka (@CMofKarnataka) October 3, 2026














