Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗ್ಯಾಸ್ ಸಿಲಿಂಡರ್‌ಗೆ ₹300 ಸಬ್ಸಿಡಿ: ಗ್ರಾಹಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ

---Advertisement---

ನವದೆಹಲಿ : ಪ್ರಧಾನಮಂತ್ರಿ ಉಜ್ವಲ ಯೋಜನೆಯ (PMUY) ಫಲಾನುಭವಿಗಳಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ. ಈ ಯೋಜನೆಯಡಿ ಬಡ ಕುಟುಂಬಗಳಿಗೆ ನೀಡಲಾಗುತ್ತಿರುವ ₹300 ಗ್ಯಾಸ್ ಸಿಲಿಂಡರ್ ಸಬ್ಸಿಡಿಯನ್ನು 2026-27ನೇ ಆರ್ಥಿಕ ವರ್ಷದಲ್ಲೂ ಮುಂದುವರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಸಬ್ಸಿಡಿ ಮೊತ್ತವು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜಮೆಯಾಗಲಿದೆ.

2016ರ ಮೇ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ಈ ಯೋಜನೆಗೆ ಚಾಲನೆ ನೀಡಿದ್ದರು. ಗ್ರಾಮೀಣ ಭಾಗದ ಮಹಿಳೆಯರು ಸೌದೆ, ಇದ್ದಿಲು ಮತ್ತು ಬೆರಣಿಗಳಿಂದ ಬರುವ ಹೊಗೆಯಿಂದ ಮುಕ್ತಿ ಪಡೆದು ಆರೋಗ್ಯ ಕಾಪಾಡಿಕೊಳ್ಳಲಿ ಎಂಬ ಉದ್ದೇಶದಿಂದ ಉಚಿತ ಗ್ಯಾಸ್ ಸಂಪರ್ಕ ಕಲ್ಪಿಸಲಾಗುತ್ತಿದೆ. ಸಾಮಾನ್ಯ ಗ್ಯಾಸ್ ಸಂಪರ್ಕಕ್ಕೆ ವಿಧಿಸುವ ಸೆಕ್ಯೂರಿಟಿ ಡೆಪಾಸಿಟ್ ಹಾಗೂ ಇತರ ಶುಲ್ಕಗಳಿಲ್ಲದೆ, ಬಡ ಕುಟುಂಬಗಳಿಗೆ ಉಚಿತ ಗ್ಯಾಸ್ ಸ್ಟೌವ್ ಮತ್ತು ಸಿಲಿಂಡರ್ ನೀಡಲಾಗುತ್ತಿದೆ.

5 ಕೆಜಿ ಸಿಲಿಂಡರ್‌ಗಳಿಗೂ ಅನ್ವಯ:

14.2 ಕೆಜಿ ಸಿಲಿಂಡರ್ ಜತೆಗೆ 5 ಕೆಜಿಯ ಸಣ್ಣ ಸಿಲಿಂಡರ್‌ಗಳಿಗೂ ಅನುಪಾತದ ಆಧಾರದ ಮೇಲೆ ಸಬ್ಸಿಡಿ ಸೌಲಭ್ಯ ಸಿಗಲಿದೆ. 2025-26ರಲ್ಲಿ ಸುಮಾರು 42 ಕೋಟಿ ಗ್ಯಾಸ್ ಮರುಪೂರಣಗಳಿಗೆ (ರೀಫಿಲ್) ಕೇಂದ್ರ ಸರ್ಕಾರ ಸಬ್ಸಿಡಿ ಒದಗಿಸಿತ್ತು.

ಮತ್ತೆ 25 ಲಕ್ಷ ಹೊಸ ಸಂಪರ್ಕಗಳಿಗೆ ಅನುಮೋದನೆ:

ಈಗಾಗಲೇ ದೇಶಾದ್ಯಂತ ಕೋಟ್ಯಂತರ ಮಹಿಳೆಯರು ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದು, ಇದೀಗ ಹೆಚ್ಚುವರಿಯಾಗಿ ಮತ್ತೊಂದು 25 ಲಕ್ಷ ಹೊಸ ಗ್ಯಾಸ್ ಸಂಪರ್ಕಗಳನ್ನು ನೀಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಮೊದಲ ಸಿಲಿಂಡರ್ ಮತ್ತು ಸ್ಟೌವ್ ಸಂಪೂರ್ಣ ಉಚಿತವಾಗಿ ಸಿಗಲಿದ್ದು, ಮುಂದಿನ ಪ್ರತಿ ಸಿಲಿಂಡರ್ ರೀಫಿಲ್ ಮೇಲೂ ₹300 ಸಬ್ಸಿಡಿ ಲಭ್ಯವಾಗಲಿದೆ.

ಅರ್ಜಿ ಸಲ್ಲಿಸುವುದು ಹೇಗೆ? ಅರ್ಹತೆಗಳೇನು?

ಅರ್ಜಿದಾರ ಮಹಿಳೆಗೆ ಕನಿಷ್ಠ 18 ವರ್ಷ ತುಂಬಿರಬೇಕು.

ಪಡಿತರ ಚೀಟಿ (ರೇಷನ್ ಕಾರ್ಡ್), ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಖಾತೆಯ ವಿವರಗಳು ಕಡ್ಡಾಯ.

ಅರ್ಹ ಫಲಾನುಭವಿಗಳು ಅಧಿಕೃತ ಉಜ್ವಲ ಯೋಜನೆ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅಥವಾ ಹತ್ತಿರದ ಗ್ಯಾಸ್ ಏಜೆನ್ಸಿ (ವಿತರಕರ) ಕಚೇರಿಗೆ ಭೇಟಿ ನೀಡಿ ನೇರವಾಗಿ ಅರ್ಜಿ ಸಲ್ಲಿಸಬಹುದು.

Join WhatsApp

Join Now

Join Telegram

Join Now