Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ: ಸೂರ್ಯಕಾಂತಿ ಖರೀದಿ ಕೇಂದ್ರ, ಸಾಲ ಮನ್ನಾಕ್ಕೆ ಆಗ್ರಹಿಸಿ ರೈತರ ಪ್ರತಿಭಟನೆ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಸೂರ್ಯಕಾಂತಿ ಖರೀದಿ ಕೇಂದ್ರ ತೆರೆಯುವಂತೆ ಕರ್ನಾಟಕ ರಾಜ್ಯ ರೈತ ಸಂಘದದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡುತ್ತ ಚಿತ್ರದುರ್ಗ ತಾಲ್ಲೂಕಿನ ತುರುವನೂರು ಹೋಬಳಿಯಲ್ಲಿ ಎಕರೆಗೆ 70-80 ಕೆ.ಜಿ.ಯಷ್ಟು ಸೂರ್ಯಕಾಂತಿ ಬೆಳೆ ಬಂದಿದ್ದು, ಕೇಂದ್ರ ಸರ್ಕಾರ ಕ್ವಿಂಟಾಲ್‍ಗೆ 8343 ರೂ. ಬೆಂಬಲ ಬೆಲೆ ಘೋಷಿಸಿರುವುದರಿಂದ ಕೂಡಲೆ ಖರೀಧಿ ಕೇಂದ್ರ ತೆರೆದು ಜಿಲ್ಲೆಯಲ್ಲಿ ಬೆಳೆಯುವ ಎಲ್ಲಾ ಬೆಳೆಗಳಿಗೂ ಬೆಳೆವಿಮೆ ಹಾಗೂ ಒಂದು ಎಕರೆಗೆ 25 ಸಾವಿರ ರೂ.ಗಳ ಪರಿಹಾರ ನೀಡುವಂತೆ ಒತ್ತಾಯಿಸಿದರು.

ರಾಜ್ಯದಲ್ಲಿ ತೀವ್ರ ಬರಗಾಲ ತಲೆದೋರಿರುವುದರಿಂದ ಬ್ಯಾಂಕ್‍ಗಳಲ್ಲಿನ ರೈತರ ಸಾಲ ಸಂಪೂರ್ಣ ಮನ್ನಾ ಮಾಡಿ ಮುಂದಿನ ಬೆಳೆಗೆ ಹೊಸ ಸಾಲ ನೀಡಬೇಕೆಂದು ಆಗ್ರಹಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಧನಂಜಯ ಹಂಪಯ್ಯನಮಾಳಿಗೆ, ಇ.ವಿ.ಶಶಿಧರರೆಡ್ಡಿ, ಕಾಕಿ ಹನುಮಂತರೆಡ್ಡಿ, ಡಿ.ಹೆಚ್.ರಾಮರೆಡ್ಡಿ, ಎ.ತಿಪ್ಪೇಸ್ವಾಮಿ ಮಲ್ಲಾಪುರ, ಕಿರಣ್, ಕೆ.ಟಿ.ಹನುಮಂತರೆಡ್ಡಿ, ಅನಿಲ್, ಕಾರ್ತಿಕ್, ಭೀಮಣ್ಣ ಸೇರಿದಂತೆ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now