Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು | ಕೆಆರ್ ಹಳ್ಳಿ ಗೇಟ್ ಬಳಿ ಅಪಘಾತ, ಮೂವರ ಸಾವು

---Advertisement---

ಸುದ್ದಿಒನ್, ಹಿರಿಯೂರು, ಅಕ್ಟೋಬರ್. 06  : ತಾಲೂಕಿನ ಕೆ ಆರ್ ಹಳ್ಳಿ ಗೇಟ್ ಬಳಿ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಮಾರ್ಗ ಮಧ್ಯೆ ಅಸುನೀಗಿದ ಘಟನೆ ಮಂಗಳವಾರ ಸಂಜೆ ನಡೆದಿದೆ.

ಮೃತರನ್ನು ಕುಷ್ಟಗಿ ತಾಲೂಕಿನ ನೀಡಕೇಶಿ ಮೂಲದ ಶಶಿಧರ್ (22) ಮಂಜುನಾಥ್ (22), ಬಸವರಾಜ (21) ಎಂದು ಗುರುತಿಸಲಾಗಿದೆ. ಇಬ್ಬರು ಗಾಯಗೊಂಡಿದ್ದು, ಹಿರಿಯೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರು ಕಡೆಯಿಂದ ಕುಷ್ಟಗಿ ಕಡೆ ಐದು ಮಂದಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಮುಂದೆ ಚಲಿಸುತ್ತಿದ್ದ ಕಂಟೇನೈರ್ ಲಾರಿಯ ಚಾಲಕ ಯಾವುದೇ ಮುನ್ಸೂಚನೆ ನೀಡದೆ ಎಡಕ್ಕೆ ತಿರುಗಿಸುತ್ತಿದ್ದಾಗ ಹಿಂದಿನಿಂದ ಕಾರು ಡಿಕ್ಕಿಯಾಗಿ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ.

ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now