Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಸ್ವಂತ ಮಗಳ ಮೇಲೆ ಅತ್ಯಾಚಾರ ; ತಂದೆಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

---Advertisement---

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 06 : ಸ್ವಂತ ಮಗಳ ಮೇಲೆ ಅತ್ಯಾಚಾರವೆಸಗಿದ ಕಾಮುಕ ತಂದೆಗೆ ಇಲ್ಲಿನ 2ನೇ ಜಿಲ್ಲಾ ಸತ್ರ ನ್ಯಾಯಾಲಯವು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 10,000/-ರೂ ದಂಡ ವಿಧಿಸಿ ಆದೇಶಿಸಿದೆ.

ತಾಲ್ಲೂಕಿನ ಮಂಜುನಾಥ ಎಂಬ 38 ವರ್ಷದ ವ್ಯಕ್ತಿಯು ತನ್ನ ಅಪ್ರಾಪ್ತ ಮಗಳಿಗೆ ನಿನ್ನ ಫ್ರೆಂಡ್ ಹುಟ್ಟಿದ ಹಬ್ಬಕ್ಕೆ ನಿನ್ನನ್ನು ಕರೆದುಕೊಂಡು ಬರಲು ಹೇಳಿದ್ದಾರೆ ಎಂದು ಸುಳ್ಳು ಹೇಳಿ ಪುಸಲಾಯಿಸಿ, ತನ್ನ ಮೋಟಾ‌ರ್ ಸೈಕಲ್‌ನಲ್ಲಿ ಕರೆದುಕೊಂಡು ಹೋಗುವಾಗ ದಾರಿ ಮದ್ಯದಲ್ಲಿ ಒಂದು ಜಮೀನಿನೊಳಗೆ ಹೋಗಿ ಹೆದರಿಸಿ ಬಲವಂತವಾಗಿ ತನ್ನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿರುತ್ತಾನೆ. ಈ ವಿಷಯ ಯಾರಿಗಾದರು ಹೇಳಿದರೆ ನಾನು ಸಾಯುತ್ತೇನೆ ಎಂದು ಹೇಳಿ ಹೆದರಿಸಿದನು. ಈ ವಿಚಾರ ತಿಳಿದು ಸಿಡಿಪಿಓ ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ಆರೋಪಿ ಮಂಜುನಾಥ ವಿರುದ್ದ ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಪ್ರಕರಣ ದಾಖಲಾಗಿರುತ್ತದೆ.

ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ನಹೀಂ ಅಹಮ್ಮದ್ ರವರು ಪ್ರಕರಣದ ತನಿಖೆ ಕೈಗೊಂಡು ಪ್ರಕರಣದಲ್ಲಿನ ಆರೋಪಿಯನ್ನು ಬಂಧಿಸಿ, ತನಿಖೆ ಪೂರೈಸಿ, ಆರೋಪಿಯ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿರುತ್ತಾರೆ.

ಈ ಪ್ರಕರಣವು ಚಿತ್ರದುರ್ಗದ 2ನೇ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿರುತ್ತದೆ.
ವಿಚಾರಣೆ ಕಾಲದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರಾದ ಶ್ರೀ.ಹೆಚ್.ಆರ್.ಜಗದೀಶ್ ರವರು ಸರ್ಕಾರದ ಪರವಾಗಿ ವಾದ ಮಂಡಿಸಿರುತ್ತಾರೆ. ನ್ಯಾಯಾಲಯದಲ್ಲಿ ಪ್ರಕರಣದ ಆರೋಪಿತನ ಮೇಲೆ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಇಂದು (06.10.2026) ನ್ಯಾಯಾಧೀಶರಾದ ಗಂಗಾಧರ ಚನ್ನಬಸಪ್ಪ ಹಡಪದ ರವರು ಪೋಕ್ಸೋ ಪ್ರಕರಣದಲ್ಲಿ ಕಲಂ:64(2),(ಎಫ್),65,351(2) ಬಿಎನ್‌ಎಸ್ ಕಲಂ: 4,5(ಎಮ್), 5(ಎನ್) ಪೋಕ್ಷೆ ಮತ್ತು 75 ಜೆ.ಜೆ ಆಕ್ಟ್ ಕಾಯ್ದೆಯಡಿಯಲ್ಲಿ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 10,000/-ರೂ ದಂಡ ವಿಧಿಸಿ ಆದೇಶಿಸಿರುತ್ತಾರೆ.

ಪ್ರಕರಣವನ್ನು ಉತ್ತಮ ರೀತಿಯಲ್ಲಿ ತನಿಖೆ ನಡೆಸಿ ಆರೋಪಿತರಿಗೆ ಶಿಕ್ಷೆ ಆಗುವಂತೆ ಕಾರ್ಯ ನಿರ್ವಹಿಸಿದ ಮಹಿಳಾ ಪೊಲೀಸ್ ಠಾಣೆಯ ತನಿಖಾಧಿಕಾರಿಯಾದ ನಹೀಂ ಅಹಮ್ಮದ್ ಪೊಲೀಸ್ ನಿರೀಕ್ಷಕರು, ತನಿಖಾ ಸಹಾಯಕರು, ಕೋರ್ಟ್ ಪೊಲೀಸ್ ಹಾಗೂ ಕೋರ್ಟ್ ಮಾನಿಟರಿಂಗ್ ಸೆಲ್ ವಿಭಾಗದವರ ಕಾರ್ಯವನ್ನು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠರಾದ ಕುಶಲ್ ಚೌಕ್ಷೆ ಐ.ಪಿ.ಎಸ್ ಮತ್ತು ಡಾ. ಶಿವಕುಮಾರ .ಆರ್ ಕೆ.ಎಸ್.ಪಿ.ಎಸ್ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಪ್ರಶಂಶಿಸಿರುತ್ತಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now