Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆಸ್ಪತ್ರೆ ಆವರಣಗಳ ಅಚ್ಚುಕಟ್ಟುತನಕ್ಕೆ ಒತ್ತು : ಡಿಹೆಚ್‍ಒ ಡಾ.ಎಂ.ಸಿ.ಸುನೀಲ್ ಕುಮಾರ್

---Advertisement---

ಚಿತ್ರದುರ್ಗ. ಅ.07: ಅ. 02 ರಿಂದ 31 ರವರೆಗೆ ಹಮ್ಮಿಕೊಳ್ಳಲಾಗಿರುವ ‘ಸ್ವಚ್ಛತಾ ಹಿ ಸೇವಾ ಅಭಿಯಾನ’ದ ಅಂಗವಾಗಿ, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಂದ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯಕ್ರಮ ಬುಧವಾರ ನಡೆಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ.ಸಿ. ಸುನೀಲ್ ಕುಮಾರ್, ಮಹಾತ್ಮ ಗಾಂಧೀಜಿಯವರು ಸ್ವತಂತ್ರ ಭಾರತ ಮಾತ್ರವಲ್ಲದೆ, ಸ್ವಚ್ಛ ಹಾಗೂ ಸುಂದರ ಭಾರತದ ಕನಸು ಕಂಡಿದ್ದರು. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಭಾರತ ಮಾತೆಗೆ, ಪರಿಸರವನ್ನು ಅಚ್ಚುಕಟ್ಟಾಗಿ ಇಟ್ಟುಕೊಳ್ಳುವ ಮೂಲಕ ಸೇವೆ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

ಆರೋಗ್ಯ ಇಲಾಖೆಯ ವ್ಯಾಪ್ತಿಗೆ ಬರುವ ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನಮ್ಮ ಕ್ಲಿನಿಕ್ ಹಾಗೂ ಆಯುಷ್ಮಾನ್ ಆರೋಗ್ಯ ಆಸ್ಪತ್ರೆಗಳ ಒಳಾಂಗಣ ಮತ್ತು ಹೊರಾಂಗಣ ಪ್ರದೇಶಗಳನ್ನು ಹಂತ-ಹಂತವಾಗಿ ಸ್ವಚ್ಛಗೊಳಿಸಬೇಕು. ಇದು ಕೇವಲ ನಾಮಕಾವಸ್ಥೆಗೆ ಸೀಮಿತವಾಗದೆ ಅರ್ಥಪೂರ್ಣವಾಗಿ ನಡೆಯಬೇಕು. ಸಾರ್ವಜನಿಕ ಸ್ಥಳಗಳ ಸ್ವಚ್ಛತೆ ಹಾಗೂ ರೋಗ ತಡೆಗಟ್ಟುವಿಕೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸ್ವಚ್ಛತಾ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಈ ಸಂದರ್ಭದಲ್ಲಿ ಚಿತ್ರದುರ್ಗ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ. ಗಿರೀಶ್, ಸಹಾಯಕ ಆಡಳಿತಾಧಿಕಾರಿ ಶಿವಗಾ ನಾಯಕ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಟಿ.ಕೃಷ್ಣಾನಾಯ್ಕ್, ಕಚೇರಿ ಅಧೀಕ್ಷಕ ಎಚ್. ಗವಿಸಿದ್ದೇಶ ಸೇರಿದಂತೆ ವಿವಿಧ ವೃಂದದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದು, ಶ್ರಮದಾನದಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now