ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ ಅ. 07 : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಘಟಕದ ವತಿಯಿಂದ ಸರ್ಕಾರಿ ಸೇವೆಯಲ್ಲಿ ಪ್ರಾಮಾಣಿಕತೆ, ಕರ್ತವ್ಯನಿಷ್ಠೆ, ದಕ್ಷತೆ ಹಾಗೂ ಜನಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುತ್ತಿರುವ ನೌಕರರನ್ನು ಗುರುತಿಸಿ ಗೌರವಿಸಲು ನೀಡಲಾಗುವ ಸರ್ಕಾರಿ ನೌಕರರ ಸೇವಾ ಪ್ರಶಸ್ತಿಗೆ ನಾಮನಿರ್ದೇಶನ ಆಹ್ವಾನಿಸಲಾಗಿದೆ ಎಂದು ಚಿತ್ರದುರ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಮಾಲತೇಶ್ ಮುದ್ದಜ್ಜಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಅರ್ಹ ನೌಕರರನ್ನು ಪ್ರಶಸ್ತಿಗೆ ನಾಮನಿರ್ದೇಶನ ಮಾಡಲು ಅ.15, 2026 ಕೊನೆಯ ದಿನವಾಗಿದ್ದು, ನಾಮ ನಿರ್ದೆಶನವನ್ನು ಕೇವಲ ಆನ್‍ಲೈನ್ ಮೂಲಕ ಸಲ್ಲಿಸಬೇಕು. ನೇರವಾಗಿ ಸಲ್ಲಿಸುವ ಪ್ರಸ್ತಾವನೆಗಳಿಗೆ ಅವಕಾಶವಿಲ್ಲ ಕರ್ತವ್ಯನಿಷ್ಠೆ, ಗುಣಮಟ್ಟದ ಹಾಗೂ ಪ್ರಾಮಾಣಿಕ ಸೇವೆ, ಸಾರ್ವಜನಿಕರಿಗೆ ಸ್ಪಂದನೆ, ಸೇವಾವಧಿಯಲ್ಲಿನ ಗಮನಾರ್ಹ ಸಾಧನೆ, ಸಾರ್ವಜನಿಕ ಹಿತಕ್ಕಾಗಿ ಕೈಗೊಂಡ ವಿಶೇಷ ಕಾರ್ಯಗಳು, ಕಚೇರಿ ಕಾರ್ಯಕ್ರಮತೆ, ಸಮಯಪಾಲನೆ, ಹೊಸ ಆಲೋಚನೆ ಹಾಗೂ ಸರಳೀಕ ರಣದ ಪ್ರಯತ್ನಗಳನ್ನು ಪ್ರಶಸ್ತಿಗೆ ಆಯ್ಕೆಯ ಮಾನದಂಡಗಳಾಗಿ ಪರಿಗಣಿಸಲಾಗುತ್ತದೆ ಎಂದು ವಿವರಿಸಿದ್ದಾರೆ.
ರಾಜ್ಯ ಸರ್ಕಾರದ ಗ್ರೂಪ್ ‘ಎ’, ‘ಬಿ’, ‘ಸಿ’ ಮತ್ತು ‘ಡಿ’ ವೃಂದದ ಖಾಯಂ ನೌಕರರು ಪ್ರಶಸ್ತಿಗೆ ನಾಮ ನಿರ್ದೇಶನಗೊಳ್ಳಲು ಅರ್ಹರಾಗಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಪ್ರತಿ ವರ್ಷ ಎರಡು ನೂರು ರೂಪಾಯಿ ಸದಸ್ಯತ್ವ ಶುಲ್ಕ ಪಾವತಿಸಿರುವ ರಾಜ್ಯದ ಜಿಲ್ಲೆ, ತಾಲ್ಲೂಕು ನಗರದಲ್ಲಿ ಕರ್ತವ್ಯ ನಿರ್ವಹಿ ಸುತ್ತಿರುವ ಅಧಿಕಾರಿ-ನೌಕರರು ಅರ್ಹರಾಗಿರುತ್ತಾರೆ. ಸರ್ಕಾರಿ ಸೇವೆಗೆ ಸೇರ್ಪಡೆಗೊಂಡು ಕನಿಷ್ಠ ಐದು ವರ್ಷಗಳ ಸೇವೆ ಪೂರ್ಣಗೊಳಿಸಿರುವುದು ಕಡ್ಡಾಯವಾಗಿದೆ. ಅರ್ಹ ಅಧಿಕಾರಿ, ನೌಕರರು ಸ್ವತಃ ಪ್ರಶಸ್ತಿಗೆ ಅರ್ಜಿ ಸಲ್ಲಿಸುವಂತಿಲ್ಲ. ಇಲಾಖಾ ಮುಖ್ಯಸ್ಥರು, ಮೇಲಾಧಿಕಾರಿಗಳು, ಸಹೋದ್ಯೋಗಿಗಳು, ಸಂಘ-ಸಂಸ್ಥೆಗಳು, ಸಾರ್ವಜನಿಕರು ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಮತ್ತು ತಾಲ್ಲೂಕು ಶಾಖೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಅರ್ಹ ನೌಕರರನ್ನು ಪ್ರಶಸ್ತಿಗೆ ನಾಮನಿರ್ದೇಶನ ಮಾಡಬಹುದು ಎಂದು ತಿಳಿಸಿದ್ದಾರೆ.
PಔWಇಖಒಇಆIಂ.Iಓ- ನಾಮನಿರ್ದೇಶನವನ್ನು ಈಔ ಮೂಲಕ ಆನ್‍ಲೈನ್‍ನಲ್ಲಿ ಮಾತ್ರ ಸಲ್ಲಿಸಬೇಕು ಎಂದು ಮಾಲತೇಶ್ ಮುದ್ದಜ್ಜಿ ತಿಳಿಸಿದ್ದಾರೆ.











